ಮಲ್ಲಿಪಟ್ಟಣದಲ್ಲಿ ವೈಜ್ಞಾನಿಕ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಸದಸ್ಯರ ಸಮ್ಮುಖ ಭೂಮಿಪೂಜೆ ನೆರವೇರಿಸಿದ ಅಧ್ಯಕ್ಷ ಎಂ.ಆರ್.ರಂಗಸ್ವಾಮಿ

ಅರಕಲಗೂಡು: ತಾಲೂಕಿನ ಮಲ್ಲಿಪಟ್ಟಣದ ಮಾರನಕೊಪ್ಪಲು ಬಳಿ ಕಸ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದರು.

ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ಭೂಮಿಪೂಜೆ ಸಲ್ಲಿಸಿ ಮಾತನಾಡಿದ ಅಧ್ಯಕ್ಷರು, ಸ್ವಚ್ಚತೆ ಎಲ್ಲರ‌ ಆದ್ಯತೆ ಆಗಬೇಕೆಂಬ ನಿಟ್ಟಿನಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ನೈರ್ಮಲ್ಯ ಕಾಪಾಡಲು ಊರ ಭಾಗದಲ್ಲಿ‌ ಸೂಕ್ತ ಸ್ಥಳ‌ ಗುರುತಿಸಿ  ಪ್ರಾರಂಭಿಕ ಹಂತದಲ್ಲಿ 12 ಲಕ್ಷ ರೂ ವೆಚ್ಚದಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಲಾಗುತ್ತಿದೆ. ಕೋಳಿ ಅಂಗಡಿಗಳು, ಮನೆ ಕಸ ಮತ್ತಿತರ ತ್ಯಾಜ್ಯವನ್ನು ಕಸ ವಿಲೇವಾರಿ ಘಟಕಕ್ಕೆ ಸಾಗಿಸಿ ವೈಜ್ಞಾನಿಕವಾಗಿ ವಿಂಗಡಿಸಲು ಪಂಚಾಯಿತಿಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ದೇಶದಲ್ಲಿ ಈಗಾಗಲೇ ಮಾರಕ ಸಾಂಕ್ರಾಮಿಕ ರೋಗಗಳಿಂದ ಉಂಟಾಗಿರುವ ಸಾವು ನೋವುಗಳನ್ನು ಮನಗಂಡು ಸಾರ್ವಜನಿಕರು ಸಹ ಎಲ್ಲೆಂದರಲ್ಲಿ ಕಸ ಬಿಸಾಡದೆ ಶುಚಿತ್ವ ಕಾಪಾಡಲು ಸಹಕರಿಸಿ ರೋಗ- ರುಜಿನಗಳಿಂದ ಜನರ‌ ಜೀವ ಉಳಿಸಲು ಜಾಗೃತರಾಗಬೇಕಿದೆ ಎಂದು ಮನವಿ ಮಾಡಿದರು.

ಗ್ರಾಪಂ ಉಪಾಧ್ಯಕ್ಷೆ ಜಯಲಕ್ಷ್ಮಿ, ಸದಸ್ಯರಾ ಸುಮಿತ್ರಮ್ಮ, ಪೂಜಾ, ಚಂದ್ರೇಗೌಡ, ಯೋಗೇಶ್, ಪ್ರಕಾಶ್, ಪಿಡಿಒ ರಂಗಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Post a Comment

0 Comments