ಅರಕಲಗೂಡು: ಮದುವೆಯಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ವಶಕ್ಕೆ ಪಡೆದು ಹಾಸನದ ಶ್ವೇತಾ ವಿದ್ಯಾಸಂಸ್ಥೆಯ ಮಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸೇರ್ಪಡೆ ಮಾಡಿರುವುದಾಗಿ ಸಿಡಿಪಿಒ ಹರಿಪ್ರಸಾದ್ ತಿಳಿಸಿದ್ದಾರೆ.
ಕೊಡಗು ಜಿಲ್ಲೆ ಸೋಮವಾರ ಪೇಟೆಯ 16 ವರ್ಷ ವಯಸ್ಸಿನ ಬಾಲಕಿಯನ್ನು ಬಿದರೂರು ಗ್ರಾಮಕ್ಕೆ ವಿವಾಹ ಮಾಡಿಕೊಡಲಾಗಿತ್ತು. ಮಕ್ಕಳ ಸಹಾಯವಾಣಿಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಾಗಿದೆ. ಕೊಣನೂರು ಪೊಲೀಸರು, ಮಕ್ಜಳ ಸಹಾಯವಾಣಿ ಅಧಿಕಾರಿಗಳು ಪಾಲ್ಗೊಂಡಿದ್ದರು.
ಸಂಪಾದಕ - ರವಿ
0 Comments