ಬಿಜೆಪಿ ಕಾರ್ಯಕರ್ತರು ಗಿಡ ನೆಟ್ಟು ಆಚರಣೆ

ಅರಕಲಗೂಡು: ಜನ ಸಂಘದ ಸಂಸ್ಥಾಪಕ ಡಾ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ 68 ನೇ ಪುಣ್ಯ ಸ್ಮರಣೆಯನ್ನು ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಬುಧವಾರ ಗಿಡಗಳನ್ನು ನೆಡುವ ಮೂಲಕ ಆಚರಿಸಿದರು.

ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಹೌಸಿಂಗ್ ಬೊರ್ಡ್ ಬಡಾವಣೆಯ ಉದ್ಯಾನದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟು ನೀರೆರೆಯಲಾಯಿತು. ತಾಲೂಕು ಬಿಜೆಪಿ ಅಧ್ಯಕ್ಷ ಎಂ.ಆರ್. ಮಂಜುನಾಥ್ ಮಾತನಾಡಿ, ಜನಸಾಮಾನ್ಯರ ಏಳಿಗೆಗೆ ಶ್ರಮಿಸಿದ ಮುಖರ್ಜಿ ಅವರ ಸೇವಾ ಕಾರ್ಯಗಳನ್ನು ಸ್ಮರಿಸಿದರು.

ಬಿಜೆಪಿ ಪ್ರದಾನ ಕಾರ್ಯದರ್ಶಿ ಎ.ಎಂ. ರಘು, ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷ ಮುತ್ತಿಗೆ ರಮೇಶ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ನಿಖಿಲ್ ಕುಮಾರ್, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಖಂಡೇಶ್ವರ ಕುಮಾರ್, ಮುಖಂಡ ಮಂಜುನಾಥ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


                     ಸಂಪಾದಕ - ರವಿ                  

Post a Comment

0 Comments