ಎ.ಆರ್.ಟಿ. ಫಲಾನುಭವಿಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಣೆ

ಅರಕಲಗೂಡು: ಪಟ್ಟಣದಲ್ಲಿ ಆರ್ಯವೈಶ್ಯ ಮಂಡಳಿ, ಪ್ರಸನ್ನ ನಂಜುಂಡೇಶ್ವರಸ್ವಾಮಿ ಮತ್ತು ಕನ್ನಿಕಾಪರಮೇಶ್ವರಿ ದೇವಾಲಯ ಚಾರಿಟಬಲ್ ಟ್ರಸ್ಟ್ ಹಾಗೂ ಕನ್ನಿಕಾ ಮಹಲ್ ಸಮಿತಿ ಸಹಯೋಗದಲ್ಲಿ ಭಾನುವಾರ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರ ದ್ವಿತೀಯ ಪೀಠಾರೋಹಣ ಮಹೋತ್ಸವದ ಅಂಗವಾಗಿ ಎ.ಆರ್.ಟಿ. ಫಲಾನುಭವಿಗಳಿಗೆ ಆಹಾರ ಪದಾರ್ಥಗಳ ಕಿಟ್ ನೀಡಲಾಯಿತು.

ವಕೀಲ ಎ.ಆರ್. ಜನಾರ್ಧನ್ ಗುಪ್ತ ಮಾತನಾಡಿ, ಆಧ್ಯಾತ್ಮಿಕವಾಗಿ ಸಮಾಜಕ್ಕೆ ಹೆಚ್ಚು ಮಾರ್ಗದರ್ಶಕರಾಗಿರುವ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರ ಪೀಠಾರೋಹಣ ಪ್ರಯುಕ್ತ ಆಹಾರ ಕಿಟ್ ವಿತರಿಸುತ್ತಿರುವುದು ಸಂತಸದ ಸಂಗತಿ. ಇಂತಹ ಸೇವಾ ಕಾರ್ಯಕ್ರಮಗಳನ್ನು ನಡೆಸಲು ದೇವರು ನಮ್ಮ ಸಮುದಾಯಕ್ಕೆ ಇನ್ನು ಹೆಚ್ಚಿನ ಶಕ್ತಿ ನೀಡಲಿ ಎಂದು ಆಶಿಸಿದರು.

ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಪಿ.ಎನ್. ಶಾಂತಕುಮಾರ್, ದೇವಾಲಯ ಸಮಿತಿ ಅಧ್ಯಕ್ಷ ಎ.ಜಿ. ರಾಮನಾಥ್, ಕನ್ನಿಕಾ ಮಹಲ್ ಸಮಿತಿ ಅಧ್ಯಕ್ಷ ಎ.ಎಸ್. ವೆಂಕಟೇಶ್ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ. ಸ್ವಾಮಿಗೌಡ ಮುಂತಾದವರು ಉಪಸ್ಥಿತರಿದ್ದರು.

                        ಸಂಪಾದಕ - ರವಿ                      

Post a Comment

0 Comments