ಅರಕಲಗೂಡು: ಗ್ರಾಮೀಣ ಪ್ರದೇಶದ ಜನರು ಕರೊನಾ ಚುಚ್ಚು ಮದ್ದು ಹಾಕಿಸಿಕೊಳ್ಳಲು ಹಿಂದೇಟು ಹಾಕದೆ ಸೋಂಕು ತಡೆಗಟ್ಟಲು ಮುಂದಾಗಬೇಕು ಎಂದು ಬಸವಾಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನುಷಾ ಯೋಗೇಶ್ ತಿಳಿಸಿದರು.
ತಾಲೂಕಿನ ಬೆಟ್ಟಸೋಗೆ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ಉಚಿತವಾಗಿ ಲಸಿಕೆ ನೀಡುತ್ತಿದ್ದು ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲರೂ ಚುಚ್ಚುಮದ್ದು ಹಾಕಿಸಿಕೊಳ್ಳಬೇಕು. ಕೋವಿಡ್ ಎರಡನೇ ಅಲೆಯನ್ನು ಸಮರ್ಥವಾಗಿ ತಡೆಗಟ್ಟಿದರೆ ಮೂರನೇ ಅಲೆ ಹೊಡೆತದಿಂದ ತಪ್ಪಿಸಿಕೊಳ್ಳಲು ಸಾಧ್ಯವಿದೆ ಎಂದು ಕಿವಿಮಾತು ಹೇಳಿದರು.
ಬಸವಾಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಅನಿಲ್ ಕುಮಾರ್ ಮಾತನಾಡಿದರು. ಮುಖ್ಯ ಶಿಕ್ಷಕ ಸ್ವಾಮಿ, ಗ್ರಾಪಂ ಪಿಡಿಒ ಮಂಜುನಾಥ್, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.
ಸಂಪಾದಕ - ರವಿ
0 Comments