ಅರಕಲಗೂಡು: ಕೇಂದ್ರ ಸರ್ಕಾರ ಮನಸ್ಸೋ ಇಚ್ಚೆ ತೈಲ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಜೀವನದ ಜತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಕೆರೆ ಏರಿ ಮುಂಭಾಗದ ಪೆಟ್ರೋಲ್ ಬಂಕ್ ಬಳಿ ಜಮಾಯಿಸಿದ ಕಾರ್ಯಕರ್ತರು ಹಾಗೂ ಮುಖಂಡರು ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಏರಿಸಿದ ಕೇಂದ್ರ ಸರ್ಕಾರದ ವಿರುದ್ದ ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಮಾತನಾಡಿ, ಕಾಂಗ್ರೆಸ್ ನೇತೃತ್ವದ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ವೇಳೆ ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆ ಮಾಡಿರಲಿಲ್ಲ. ನರೇಂದ್ರ ಮೋದಿ ಪ್ರಧಾನಿಯಾದ ನಂತರ ಅನಿಯಂತ್ರಿತವಾಗಿ ಬೆಲೆ ಏರಿಕೆ ಮಾಡಿ ಕಾರ್ಪೋರೇಟರ್‌ಗಳಿಗೆ ಮಣೆ ಹಾಕುತ್ತಿದ್ದಾರೆ. ಅಚ್ಚೆ ದಿನ್ ತರುವುವುದಾಗಿ ಜನರಿಗೆ ಹುಸಿ ಭರವಸೆಗಳನ್ನು ನೀಡಿ ಮರಳು ಮಾಡಿ ವಂಚಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಲಾಕ್‌ಡೌನ್ ಸಂಕಷ್ಟದಲ್ಲಿ ಮುಳುಗಿರುವ ಜನತೆಯ ನಿತ್ಯದ ಬದುಕಿನ ಮೇಲೆ ಬರೆ ಎಳೆದಿದ್ದಾರೆ ಎಂದು ಆರೋಪಿಸಿದರು.
ಕೆಪಿಸಿಸಿ ಸದಸ್ಯ ಮಂಜುನಾಥ್, ಮುಖಂಡ ಡಾ. ದಿನೇಶ್ ಭೈರೇಗೌಡ, ಪಪಂ ಸದಸ್ಯರಾದ ಪ್ರದೀಪ್ ಕುಮಾರ್, ಅನಿಕೇತನ್ ಲೋಕೇಶ್, ಜಮೀರ್, ವಿಜಯ್, ಸತೀಶ್, ತಾಪಂ ಮಾಜಿ ಅಧ್ಯಕ್ಷ ನಾಗರಾಜ್ ಮುಂತಾದವರು ಪಾಲ್ಗೊಂಡಿದ್ದರು.
ಸಂಪಾದಕ - ರವಿ
0 Comments