ಕೋವಿಡ್ ಸೋಂಕು ತಡೆಗೆ ಬಿಗಿ ಕ್ರಮ ಬೇಕು ಶಾಸಕರ ಖಡಕ್

ಅರಕಲಗೂಡು: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೋಡೆಲ್ ಅಧಿಕಾರಿಗಳು ಮತ್ತು ಕಾರ್ಯಪಡೆಯ ಕಾರ್ಯ ತೃಪ್ತಿದಾಯಕವಾಗಿಲ್ಲದ ಪರಿಣಾಮ ಕೋವಿಡ್ ಸೋಂಕಿತರ ಪ್ರಮಾಣ ಇಳಿಕೆಯಾಗುತ್ತಿಲ್ಲ ಎಂದು ಶಾಸಕ ಎ.ಟಿ. ರಾಮಸ್ವಾಮಿ ಅಸಮಧಾನ ಹೊರಹಾಕಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕೋವಿಡ್ ಕಾರ್ಯಪಡೆ ಸಭೆಯಲ್ಲಿ ಕರೊನಾ ನಿರ್ವಹಣೆ ಕುರಿತ ಪ್ರಗತಿ ಪರಿಶಿಲಿಸಿ ಮಾತನಾಡಿದ ಅವರು, ಸಕ್ರೀಯ ಪ್ರಕರಣಗಳು ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿದ್ದು ತಾಲೂಕು ಜಿಲ್ಲೆಯಲ್ಲಿ ಮೊದಲ ಸ್ಥಾನದಲಿದೆ ಇದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದರು. 

ನಿರಂತರವಾಗಿ ಸಭೆಗಳನ್ನು ನಡೆಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದಿದ್ದರೂ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇದೆ. ಹೋಂ ಐಸೋಲೇಷನ್ ಆದವರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ಸೇರ್ಪಡೆ ಮಾಡುವಲ್ಲಿನ ವೈಫಲ್ಯವೆ ಸಕ್ರಿಯ ಪ್ರಕರಣಗಳು ಹೆಚ್ಚಳಕ್ಕೆ ಕಾರಣವಾಗಿದೆ. ಮುಂದಿನ ಸಭೆಯ ವೇಳೆಗೆ ಎಲ್ಲ ಸೋಂಕಿತರನ್ನು ಕಡ್ಡಾಯವಾಗಿ ಆರೈಕೆ ಕೇಂದ್ರಕ್ಕೆ ದಾಖಲಿಸಿರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. 

ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಕೋವಿಡ್ ಪೀಡಿತರ ವಾರ್ಡ್ ನಲ್ಲಿ ಸಂಬAಧಿಗಳು, ಕುಟುಂಬದವರು ಒಡಾಡುತ್ತಿರುವುದು ಕಂಡುಬAತು. ಸೋಂಕಿತರ ಸಂಪರ್ಕ ಹೊಂದಿರುವ ಇವರು ಹೊರಬಂದು ಜನಗಳೊಂದಿಗೆ ಬೆರೆಯುವುದರಿಂದ ಸೋಂಕು ಹೆಚ್ಚಲು ಕಾರಣವಾಗುತ್ತಿದೆ ಈ ಕುರಿತು ಕಟ್ಟು ನಿಟ್ಟಿನ ಕ್ರಮ ಅಗತ್ಯ, ಎಲ್ಲ ಇಲಾಖೆಗಳೂ ಪೂರಕ ರೀತಿಯ ಸಹಕಾರದಿಂದ ಕಾರ್ಯ ನಿರ್ವಹಿಸುವ ಮೂಲಕ ಸೋಂಕು ತಡೆಗೆ ಕ್ರಮಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ತಾಲೂಕು ನೋಡೆಲ್ ಅಧಿಕಾರಿ ಡಾ ಸುದರ್ಶನ್, ತಹಸೀಲ್ದಾರ್ ವೈ.ಎಂ. ರೇಣುಕುಮಾರ್, ತಾಪಂ ಇಒ ಎನ್. ರವಿಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಸ್ವಾಮಿಗೌಡ ಮುಂತಾದವರು ಉಪಸ್ಥಿತರಿದ್ದರು.

                        ಸಂಪಾದಕ - ರವಿ                       

Post a Comment

0 Comments