ಕೆ ಆರ್ ಎಸ್ ಪಕ್ಷ ಬೆಂಬಲಿಸಲು ಮನವಿ

ಅರಕಲಗೂಡು: ಕಲುಷಿತಗೊಂಡಿರುವ ರಾಜಕೀಯ ವ್ಯವಸ್ಥೆಯನ್ನು ಶುದ್ಧೀಕರಣಗೊಳಿಸಿ ಬದಲಾವಣೆ ತಂದು ಮತದಾರರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಎಲ್ಲರೂ ಕರ್ನಾಟಕ ರಾಷ್ಟç ಸಮಿತಿ ಪಕ್ಷವನ್ನು ಬೆಂಬಲಿಸಬೇಕು ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಕ್ಮಲ್ ಜಾವೀದ್ ಮನವಿ ಮಾಡಿದರು.

ಕಳೆದ ೭೦ ವರ್ಷಗಳಿಂದ ಕೇವಲ ಹಣಬಲ, ತೋಳ್ಬಲ ಇರುವ ವ್ಯಕ್ತಿಗಳು ರಾಜಕೀಯ ಅಧಿಕಾರ ಪಡೆದು ಮತದಾರರಿಗೆ ಮೋಸ ಮಾಡುತ್ತಿದ್ದಾರೆ. ಕೋಮುವಾದಿ ಬಣ್ಣ ಬಳಿದು ಜಾತಿಗಳ ನಡುವೆ ಒಡಕುಂಟು ಮಾಡಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಕ್ಷೇತ್ರದಲ್ಲಿ ಎರಡು ನದಿಗಳು ಹರಿಯುತ್ತಿದ್ದರೂ ರೈತರ ಅಭಿವೃದ್ಧಿ ಮರೀಚಿಕೆಯಾಗಿದೆ. ಜಿಲ್ಲೆಯಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳು ನಡೆಯದೆ ಅಲೆದಾಡುವ ಸ್ಥಿತಿ ತಪ್ಪಿಲ್ಲ. ಮತದಾರರು ರವಿಕೃಷ್ಣಾ ರೆಡ್ಡಿ ಅವರು ಸ್ಥಾಪಿಸಿರುವ ಕರ್ನಾಟಕ ರಾಷ್ಟç ಸಮಿತಿ ಪಕ್ಷದ ಸಂಘಟನೆಗೆ ಸಹಕಾರ ನೀಡಿ ಬದಲಾವಣೆಗೆ ಮುನ್ನುಡಿ ಬರೆಯಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿನಂತಿಸಿದರು.

ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಕೇಶವಮೂರ್ತಿ ಮಾತನಾಡಿ, ಕ್ಷೇತ್ರದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಲಾಗುವುದು. ಬರುವ ಜಿಪಂ ಮತ್ತು ತಾಪಂ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಮುಂದಿನ ದಿನಗಳಲ್ಲಿ ಪ್ರತಿ ಹಳ್ಳಿಗಳಲ್ಲಿ ಲಂಚಮುಕ್ತ ಅಭಿಯಾನ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಪಕ್ಷದ ಹೊಳೆನರಸೀಪುರ ಘಟಕದ ಅಧ್ಯಕ್ಷ ಸತೀಶ್‌ಗೌಡ, ಆನೇಕಲ್ ತಾಲೂಕು ಘಟಕದ ಅಧ್ಯಕ್ಷ ಮಹೇಶ್ ರೆಡ್ಡಿ, ಹಾಸನ ಘಟಕದ ಜಿಲ್ಲಾ ಕಾರ್ಯದರ್ಶಿ ರಮೇಶ್ ಬೂವನಹಳ್ಳಿ ಮತ್ತಿತರರು ಗೋಷ್ಠಿಯಲ್ಲಿದ್ದರು.

                       - ಸಂಪಾದಕ - ರವಿ

Post a Comment

0 Comments