ಅರಕಲಗೂಡು: ಕಾವೇರಿ ನದಿ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ತಹಸೀಲ್ದಾರ್ ವೈ.ಎಂ. ರೇಣುಕುಮಾರ್ ತಿಳಿಸಿದರು.
ತಾಲೂಕಿನ ರಾಮನಾಥಪುರದಲ್ಲಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಗುರುವಾರ ಶ್ರೀ ರಾಮೇಶ್ವರ ದೇವಸ್ಥಾನದ ವಹ್ನಿಪುಷ್ಪರಣಿ ನದಿ ತಟಕ್ಕೆ ಭೇಟಿ ನೀರಿನ ಮಟ್ಟವ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗಿನ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಹಾರಂಗಿ ಜಲಾಶಯಕ್ಕೆ ಒಳ ಹರಿವು ಹೆಚ್ಚುತ್ತಿದೆ. ಹೀಗಾಗಿ ಜಲಾಶಯದಿಂದ ಹೆಚ್ಚುವರಿ ನೀರು ಹೊರ ಬಿಡಲಾಗುತ್ತದೆ. ನದಿ ಪಾತ್ರದಲ್ಲಿ ಜನರು ಸುರಕ್ಷತೆ ಕಡೆಗೆ ಗಮನ ಹರಿಸಬೇಕು ಎಂದರು.
ಕಳೆದ ವರ್ಷ ಕಾವೇರಿ ಪ್ರವಾಹ ಉಂಟಾಗಿತ್ತು. ಈ ಬಾರಿಯೂ ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯ ಸಿದ್ದತೆ ಕೈಗೊಳ್ಳಲಾಗಿದೆ. ಜಾನುವಾರುಗಳು ನದಿಯತ್ತ ಸುಳಿಯದೆಂತೆ ಸಾರ್ವಜನಿಕರು ನಿಗಾ ವಹಿಸಬೇಕು ಎಂದು ಸಲಹೆ ಮಾಡಿದರು.
ಉಪ ತಹಸೀಲ್ದಾರ್ ಸಿ. ಸ್ವಾಮಿ, ಗ್ರಾಮ ಲೆಕ್ಕಾಧಿಕಾರಿ ಕೆ.ಜೆ. ಧರ್ಮೇಶ್, ಯಾದವ್, ಕಾರ್ತಿಕ್, ಬಸವರಾಜು, ಪ್ರದೀಪ್ ಕಾಂಬ್ಳೆ ಇದ್ದರು.
ಸಂಪಾದಕ - ರವಿ
0 Comments