ಅರಕಲಗೂಡು: ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮಯದಲ್ಲಿ ಸರ್ಕಾರ ಸೂಚಿಸಿರುವ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲನೆ ಮಾಡುವ ಮೂಲಕ ಸುರಕ್ಷಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಎ.ಟಿ.ರಾಮಸ್ವಾಮಿ ತಿಳಿಸಿದರು.
ಪಟ್ಟಣದ ಶಿಕ್ಷಕರ ಭವನದಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ವಿತರಿಸಲು ಮಾಸ್ಕ್ ಗಳನ್ನು ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಿಗೆ ಹಸ್ತಾಂತರಿಸಿ ಮಾತನಾಡಿ, ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ಉಚಿತವಾಗಿ ಮಾಸ್ಕ್ಗಳನ್ನು ಕೊಡುಗೆಯಾಗಿ ನೀಡಿದೆ. ತಾಲ್ಲೂಕಿನ 14 ಕೇಂದ್ರಗಳಲ್ಲಿ 2503 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಎಲ್ಲರಿಗೂ ವಿತರಣೆ ಮಾಡಲು ಕ್ರಮ ಕೈಗೊಳ್ಳಾಗಿದೆ. ಇದಲ್ಲದೆ ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಆರೋಗ್ಯ ಇಲಾಖೆ ಹೆಲ್ತ್ ಡೆಸ್ಕ್ ತೆರೆದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಿದೆ. ಕೋವಿಡ್ ಪೀಡಿತ ವಿದ್ಯಾರ್ಥಿಗಳಿದ್ದರೆ ಅವರಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಸಲು ವ್ಯವಸ್ಥೆ ಮಾಡಿದ್ದು ವಿದ್ಯಾರ್ಥಿಗಳು ಭಯ ಬಿಟ್ಟು ಪರೀಕ್ಷೆ ಎದುರಿಸುವಂತೆ ಸಲಹೆ ಮಾಡಿದರು.
ಸಂಪಾದಕ - ರವಿ
0 Comments