ಎಲ್ಲ ನೌಕರ ವರ್ಗದವರೂ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ : ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಮನವಿ

ಅರಕಲಗೂಡು: ಎಲ್ಲ ನೌಕರ ವರ್ಗದವರು ಹಾಗೂ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ದಾಖಲಾತಿ ಹೆಚ್ಚಿಸಿದರಷ್ಟೆ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಬಹುದು ಎಂದು ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ತಿಳಿಸಿದರು.

ತಾಲೂಕಿನ ಮಲ್ಲಿಪಟ್ಟಣದಲ್ಲಿ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಾಲಾ ಮಕ್ಕಳ ವಿಶೇಷ ದಾಖಲಾತಿ ಆಂದೋಲನ ಜಾಗೃತಿ ರಥಕ್ಕೆ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, ಕೋವಿಡ್ ಕಾರಣದಿಂದಾಗಿ ಮುಚ್ಚಲ್ಪಟ್ಟಿದ್ದ ಶಾಲೆಗಳನ್ನು ತೆರೆಯಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಜಾಗೃತಿ ಮೂಡಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಸೇರಿಸಿ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಒದಗಿಸುತ್ತಿರುವ ಅನೇಕ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜೇಗೌಡ, ಸಂಘದ ಲೋಕೇಶ್, ಚಂದ್ರೇಗೌಡ, ಮಮತಾ, ಮಲ್ಲಿಕಾರ್ಜುನ ಮತ್ತು ಶಿಕ್ಷಕರು ಪಾಲ್ಗೊಂಡಿದ್ದರು.

               ಸಂಪಾದಕ - ರವಿ

Post a Comment

0 Comments