ಅರಕಲಗೂಡು: ತಾಲೂಕಿನ ಮಲ್ಲಿಪಟ್ಟಣ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಡಾ. ಶ್ಯಾಮ್‌ಪ್ರಸಾದ್ ಮುಖರ್ಜಿ ಜಯಂತಿ ಅಂಗವಾಗಿ ಬಿಜೆಪಿ ಮಂಡಲ ಯುವ ಮೋರ್ಚಾ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಡಾ. ಶ್ಯಾಮ್‌ಪ್ರಸಾದ್ ಮುಖರ್ಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಮಾತನಾಡಿ, ಡಾ. ಶ್ಯಾಮ್‌ಪ್ರಸಾದ್ ಮುಖರ್ಜಿ ಅವರು ದೇಶದ ಅಭಿವೃದ್ಧಿ ಮಹತ್ತರವಾದ ಕೊಡುಗೆ ಸಲ್ಲಿಸಿದ್ದರೆ. ನಾನಾ ಜಾತಿಯ ಸಸಿಗಳನ್ನು ನೆಟ್ಟು ಇವರ ಜಯಂತಿ ಕಾರ್ಯಕ್ರಮ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು.
ಮುಖಂಡರಾದ ರಘು, ಖಂಡೇಶ್ವರ್ ಕುಮಾರ್, ರಾಜು, ಧರಣಿ, ಸಚಿನ್, ಕಾರ್ತಿಕ್ ಮುಂತಾದವರು ಪಾಲ್ಗೊಂಡಿದ್ದರು.
-ಸಂಪಾದಕ - ರವಿ

0 Comments