ಅರಕಲಗೂಡು: ತಾಲೂಕಿನ ಶಿರದನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಾಯಿತು.
ರಾಮನಾಥಪುರ ನಾಡಕಚೇರಿ ಉಪ ತಹಸೀಲ್ದಾರ್ ಸಿ. ಸ್ವಾಮಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕರೊನಾ ಸೋಂಕು ಇನ್ನಷ್ಟು ಪ್ರಮಾಣದಲ್ಲಿ ತಗ್ಗಬೇಕು. ಹೀಗಾಗಿ ಎಲ್ಲರೂ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಕರೊನಾ ಮುಕ್ತ ಗ್ರಾಮವನ್ನಾಗಿ ಮಾಡಬೇಕು. 18 ವರ್ಷ ಮೇಲ್ಪಟ್ಟವರು ಸ್ವಯಂಪ್ರೇರಿತರಾಗಿ ಲಸಿಕಾ ಕೇಂದ್ರಕ್ಕೆ ಬಂದು ಚುಚ್ಚುಮದ್ದು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಮುಖ್ಯ ಶಿಕ್ಷಕ ಶ್ರೀನಿವಾಸ್, ಆರೋಗ್ಯ ನಿರೀಕ್ಷಕ ಲೋಕೇಶ್ ಗ್ರಾಮ ಲೆಕ್ಕಾಧಿಕಾರಿ ಕೆ.ಜೆ. ಧರ್ಮೇಶ್, ಆರೋಗ್ಯ ಸಹಾಯಕಿ ಪದ್ಮ, ಆಶಾ ಕಾರ್ಯಕರ್ತೆ ಅಶ್ವಿನಿ, ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ, ಇದ್ದರು.
-ಸಂಪಾದಕ - ರವಿ

0 Comments