ಅರಕಲಗೂಡು: ತಾಲ್ಲೂಕಿನಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆದಿದ್ದು 7 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು.
ಒಟ್ಟು 2503 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಲು ನೊಂದಾಯಿಸಿಕೊಂಡಿದ್ದು ಇವರಲ್ಲಿ 2496 ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆ ನಡೆದ ಎಲ್ಲ 14 ಕೇಂದ್ರಗಳಲ್ಲೂ ಪರೀಕ್ಷೆ ಸುಗಮ ರೀತಿಯಲ್ಲಿ ನಡೆದಿದೆ.
ಯಾವುದೇ ಕೋವಿಡ್ ಪ್ರಕರಣಗಳು ವರದಿಯಾಗಿಲ್ಲ. ಮಲ್ಲಿಪಟ್ಟಣದ ಪರೀಕ್ಷಾ ಕೇಂದ್ರದಲ್ಲಿ ಬಾಲಕಿಯೊರ್ವಳಿಗೆ ಶೀತ ಬಾಧೆಯಿದ್ದ ಕಾರಣ ಮುನ್ನೆಚ್ಚರಿಕೆ ಕ್ರಮ ವಹಿಸಿ ಪ್ರತ್ಯೇಕವಾಗಿ ಪರೀಕ್ಷೆ ಬರೆಸಲಾಯಿತು ಎಂದು ಬಿಇಒ ಎಚ್.ಕೆ.ಮನಮೋಹನ್ ತಿಳಿಸಿದರು.
-ಸಂಪಾದಕ - ರವಿ
0 Comments