ಅರಕಲಗೂಡು: ತಾಲೂಕಿನ ರಾಮನಾಥಪುರದ ಐತಿಹಾಸಿಕ ಶ್ರೀ ರಾಮೇಶ್ವರ ದೇವಾಲಯದ ಗೋಪುರ ವಿಗ್ರಹ ಕಳಚಿ ಬಿದ್ದು ಶಿಥಿಲಾವಸ್ಥೆಯಲ್ಲಿರುವ ಪರಿಣಾಮ ಮುನ್ನೆಚ್ಚರಿಕೆ ವಹಿಸಿ ಭಕ್ತರ ಪ್ರವೇಶ ನಿರ್ಬಂಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ವೈ.ಎಂ. ರೇಣುಕುಮಾರ್ ತಿಳಿಸಿದರು.
ದೇವಾಲಯಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಸಾವಿರಾರು ವರ್ಷಗಳ ಪುರಾತನ ದೇವಾಲಯ ಇತ್ತೀಚೆಗೆ ನಿರಂತರ ಸುರಿದ ಮಳೆಗೆ ಗೋಪುರದ ವಿಗ್ರಹಗ ಕುಸಿದು ಹಾನಿಗೀಡಾಗಿ ಸುತ್ತಲಿನ ಪೌಶಿ ಹಾಗೂ ಗರ್ಭಗುಡಿ ಹಾನಿಯಾಗಿದೆ. ದೇವಸ್ಥಾನದ ದುರಸ್ತಿಗಾಗಿ ಪುರಾತತ್ವ ಇಲಾಖೆಗೆ 4.80 ಕೋಟಿ ಅಂದಾಜು ಪಟ್ಟಿ ತಯಾರಿಸಿ ವರದಿ ನೀಡಲಾಗಿದೆ. ದುರಸ್ತಿಯಾಗುವ ತನಕ ಶಿಥಿಲ ದೇವಸ್ಥಾನದಲ್ಲಿ ಯಾವುದೇ ಅಹಿತಕರ ಘಟನೆ ಹಾಗೂ ಪ್ರಾಣಹಾನಿ ತಪ್ಪಿಸುವ ಸಲುವಾಗಿ ತಾತ್ಕಾಲಿಕವಾಗಿ ಸಾರ್ವಜನಿಕ ಮತ್ತು ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು. ಭಕ್ತರು ಸಹಕರಿಸಬೇಕು ಎಂದರು.
ದೇವಾಲಯವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿ ಪುರಾತನ ಸ್ಮಾರಕವನ್ನು ಉಳಿಸಬೇಕು ಎಂದು ಗ್ರಾಪಂ ಸದಸ್ಯ ಸಿದ್ದಯ್ಯ, ಮುಖಂಡ ರಘು ತಹಸೀಲ್ದಾರ್ ಅವರಿಗೆ ಮನವಿ ಮಾಡಿದರು.
ಉಪ ತಹಸೀಲ್ದಾರ್ ಸಿ. ಸ್ವಾಮಿ, ಗ್ರಾಮ ಲೆಕ್ಕಾಧಿಕಾರಿ ಧರ್ಮೇಶ್, ಗ್ರಾಮಸ್ಥರು ಇದ್ದರು.
ಸಂಪಾದಕ - ರವಿ
0 Comments