ಅರಕಲಗೂಡು: ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕೆಲವು ಪುಂಡರು ವಿದ್ಯಾರ್ಥಿಗಳನ್ನು ಚುಡಾಯಿಸುತ್ತಿದ್ದು ಈ ಕೃತ್ಯಕ್ಕೆ ಕಡಿವಾಣ ಹಾಕಬೇಕು ಎಂದು ತಾಲೂಕು ಛಲವಾದಿ ಮಹಾಸಭಾ ವಿದ್ಯಾರ್ಥಿ ಘಟಕ ಒತ್ತಾಯಿಸಿದೆ.
ವಿದ್ಯಾರ್ಥಿ ಘಟಕದ ಅಧ್ಯಕ್ಷ ವಿನಯ್ ಪ್ರಬುದ್ ನೇತೃತ್ವದಲ್ಲಿ ಕಾರ್ಯಕರ್ತರು ಇತ್ತೀಚೆಗೆ ಪಟ್ಟಣ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಾಲಾ ಅವರಿಗೆ ಮನವಿ ಸಲ್ಲಿಸಿದರು. ಹೆಣ್ಣು ಮಕ್ಕಳ ಮೇಲೆ ಇತ್ತೀಚೆಗೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಶಾಲಾ- ಕಾಲೇಜುಗಳಿಗೆ ವಿದ್ಯಾರ್ಥಿನಿಯರು ಓಡಾಡುವ ಜಾಗದಲ್ಲಿ ಪುಂಡರ ಹಾವಳಿ ಕಂಡುಬAದಿದೆ. ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಿ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಬೇಕು. ವಿದ್ಯಾರ್ಥಿನಿಯರ ಕಾಲೇಜು ಹಾಗೂ ಬಸ್ ನಿಲ್ದಾಣ ಬಳಿ ಪೊಲೀಸ್ ಬೀಟ್ ನಿಯೋಜಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ತಾಲೂಕು ಛಲವಾದಿ ಮಹಾಸಭಾ ಉಪಾಧ್ಯಕ್ಷ ಎ.ವಿ. ಲಿಂಗರಾಜು, ವಿದ್ಯಾರ್ಥಿ ಘಟಕದ ಪವನ್, ಗುರು ಮುಂತಾದವರು ಇದ್ದರು.
0 Comments