ಕಲಾವಿದರಿಗೆ ಕೋವಿಡ್ ಲಸಿಕಾ ಅಭಿಯಾನ

ಅರಕಲಗೂಡು: ಗ್ರಾಮೀಣ ಭಾಗದ ಕಲಾವಿದರ ಬದುಕಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಸವಲತ್ತುಗಳನ್ನು ಒದಗಿಸುವ ಅಗತ್ಯವಿದೆ ಎಂದು ಏಕತಾರಿ ಸಾಂಸ್ಕೃತಿಕ ಸಂಘಟನೆ ಅಧ್ಯಕ್ಷ ದೇವಾನಂದ ವರಪ್ರಸಾದ್ ಮನವಿ ಮಾಡಿದರು.

ಪಟ್ಟಣದ ಉದ್ಯೋಗ ಮಾಹಿತಿ ಕೇಂದ್ರದಲ್ಲಿ ಏಕತಾರಿ ಸಾಂಸ್ಕೃತಿಕ ಸಂಘಟನೆ, ಕರ್ನಾಟಕ ಜಾನಪದ ಪರಿಷತ್ತು, ಕರ್ನಾಟಕ ಡಿಪ್ಲೋಮೋ ಮತ್ತು ಪದವೀಧರರ ಚಿತ್ರ ಕಲಾವಿದರ ಸಂಘ ಹಾಸನಾಂಬ ಕಲಾ ಮತ್ತು ಸಾಂಸ್ಕೃತಿಕ ಸಂಘಟನೆ, ದೊಡ್ಡಮ್ಮದೇವಿ ಕಲಾ ಮತ್ತು ಸಾಂಸ್ಕೃತಿಕ ಸಂಘದ ಸಹಯೋಗದಲ್ಲಿ ಇತ್ತೀಚೆಗೆ ತಾಲೂಕಿನ ಕಲಾವಿದರಿಗೆ ಏರ್ಪಡಿಸಿದ್ದ ಉಚಿತ ಕೋವಿಡ್ ಲಸಿಕಾ ಅಭಿಯಾನ ವನ್ನು ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಲಾವಿದರು ದೇಶದ ಸಂಪತ್ತು. ಹಲವಾರು ಪ್ರತಿಭಾನ್ವಿತ ಕಲಾವಿದರನ್ನು ಕೋವಿಡ್ ಸೋಂಕಿನಿAದಲೇ ಕಳೆದುಕೊಂಡಿದ್ದೇವೆ. 
ಕೋವಿಡ್‌ನಿಂದ ದೂರ ಇರಲು ಲಸಿಕೆಯನ್ನು ಪ್ರತಿಯೊಬ್ಬರೂ ಹಾಕಿಸಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿರುವ ಜಾನಪದ ಕಲಾವಿದರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೋವಿಡ್ ಲಸಿಕಾ ಅಭಿಯಾನ ಆಯೋಜಿಸಲಾಗಿದೆ ಎಂದು ತಿಳಿಸಿದರು. 
ಕೋವಿಡ್ ಲಸಿಕೆಗೆ ಸಂಬAಧಿಸಿದ ಚಿತ್ರ ಬಿಡಿಸುವ ಮೂಲಕ ಉದ್ಘಾಟಿಸಿದ ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ವೈದ್ಯಾಧಿಕಾರಿ ಡಾ. ಸ್ವಾಮಿಗೌಡ ಮಾತನಾಡಿ, ಕಲಾವಿದರ ಸಂಘಟನೆಗಳು ಈ ರೀತಿಯ ಸಾಮಾಜಿಕ ಜವಾಬ್ದಾರಿಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಚಿತ್ರ ಕಲಾವಿದ ಪ್ರವೀಣ್ ಕುಮಾರ್ ಮಾತನಾಡಿ, ಕಲಾವಿದರು ತಮ್ಮ ಕಲೆಯನ್ನು ಪ್ರದರ್ಶಿಸುವ ಜತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿರುವುದೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕಾರಿ ಎಂದರು.
ಪಟ್ಟಣ ಪಂಚಾಯಿತಿ ಸದಸ್ಯರಾದ ಅನಿಕೇತನ್ ಹಾಗೂ ಕಲಾವಿದರಾದ ಮಹೇಶ್, ಗಂಗಾಧರ್, ವರುಣ್, ಚಂದ್ರಣ್ಣ, ಕೇಶವ,ರಾಜೇಗೌಡ ಮತ್ತಿತರು ಹಾಜರಿದ್ದರು.
ವಿವಿಧ ವಾರ್ಡ್ಗಳಲ್ಲಿ ಸಂಚರಿಸಿ ಮನೆ ಮನೆಗಳಿಗೆ ತೆರಳಿ ಕೋವಿಡ್ ಲಸಿಕೆ ಕುರಿತು ಜನತೆಗೆ ಜಾಗೃತಿ ಮೂಡಿಸಲಾಯಿತು. ಸುಮಾರು ಐವತ್ತು ಜನ ಕಲಾವಿದರು ಹಾಗೂ ಅವರ ಕುಟುಂಬದವರು ಲಸಿಕೆ ಪಡೆದರು.

Post a Comment

0 Comments