ಮಳೆ ಹಾನಿ ಪ್ರದೇಶಗಳಿಗೆ ತಹಸೀಲ್ದಾರ್ ವೈ.ಎಂ. ರೇಣುಕುಮಾರ್ ಭೇಟಿ ನೀಡಿ ವೀಕ್ಷಣೆ


ಅರಕಲಗೂಡು: ತಾಲೂಕಿನ ರಾಮನಾಥಪುರ ಹೋಬಳಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಗುರುವಾರ ತಹಸೀಲ್ದಾರ್ ವೈ.ಎಂ. ರೇಣುಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಸವಾಪಟ್ಟಣದಲ್ಲಿ ಭಾರಿ ಮಳೆಯಿಂದ ಹಾನಿಗೀಡಾದ ಕುರಿತು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮದಲ್ಲಿ ಅತಿಯಾದ ಮಳೆ ಹೊಡೆತಕ್ಕೆ ಸಿಲುಕಿ 30 ಮನೆಗಳಿಗೆ ನೀರು ನುಗ್ಗಿದ್ದು ಆಹಾರ ಪದಾರ್ಥಗಳು, ದಿನನಿತ್ಯ ಮನೆ ಬಳಕೆ ವಸ್ತುಗಳು ಹಾಳಾಗಿವೆ. ಹಲವೆಡೆ ಬೆಳೆ ಹಾನಿಗೊಳಗಾಗಿದೆ. ಈ ಕುರಿತು ಸಂಬAಧಿಸಿದ ಅಧಿಕಾರಿಗಳಿಂದ ವರದಿ ಪಡೆದು ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಬಸವನಹಳ್ಳಿ ಬಳಿ ಕೊಲ್ಲಿ ಸೇತುವೆ ಮುರಿದು ಬದಲಿ ರಸ್ತೆ ಕೊಚ್ಚಿ ಹೋದ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.
 ಉಪ ತಹಸೀಲ್ದಾರ್ ಸಿ. ಸ್ವಾಮಿ, ಗ್ರಾಮ ಲೆಕ್ಕಾಧಿಕಾರಿ ಮದನ್, ಗ್ರಾಪಂ ಪಿಡಿಒ ಮಂಜುನಾಥ್, ತಾಪಂ ಮಾಜಿ ಸದಸ್ಯ ಬಿ.ಸಿ. ವೀರೇಶ್ ಮತ್ತು ಗ್ರಾಮಸ್ಥರು ಹಾಜರಿದ್ದರು.

Post a Comment

0 Comments