ಅರಕಲಗೂಡು: ಗ್ರಾಮೀಣ ಪ್ರದೇಶದ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಿ ಸರ್ಕಾರದ ಸವಲತ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವಲ್ಲಿ ಅಧಿಕಾರಿಗಳು ಕರ್ತವ್ಯ ನಿಷ್ಠೆ ಪ್ರದರ್ಶಿಸಬೇಕು ಎಂದು ಶಾಸಕ ಎ.ಟಿ.ರಾಮಸ್ವಾಮಿ ತಿಳಿಸಿದರು.
ತಾಲೂಕಿನ ವಿ.ಜಿ. ಕೊಪ್ಪಲು ಗ್ರಾಮದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕು ಆಡಳಿತವು ನಿಮ್ಮ ಮನೆಬಾಗಿಲಿಗೆ ಬಂದಿದ್ದು ವಿವಿಧ ಇಲಾಖೆಗಳಲ್ಲಿ ಬರಬೇಕಿರುವ ಸೌಲಭ್ಯಗಳನ್ನು ಪಡೆಯಲು ಮುಂದಾಗಬೇಕು. ಚಿಕ್ಕಹಳ್ಳಿ ಗ್ರಾ.ಪಂ ವ್ಯಾಪ್ತಿಯ ಜನರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಸಲಹೆ ನೀಡಿದರು.
ಅಧಿಕಾರಿಗಳು ಸಂಜೆತನಕ ಸ್ಥಳದಲ್ಲೇ ಹಾಜರಿದ್ದು ಸ್ವೀಕರಿಸುವ ಅರ್ಜಿಗಳಲ್ಲಿ ಸಾಧ್ಯವಾದಷ್ಟು ಅಧಿಕ ಅರ್ಜಿಗಳನ್ನು ಸ್ಥಳದಲ್ಲೇ ಬಗೆಹರಿಸಿ ಜನರಿಗೆ ಅನುಕೂಲ ಕಲ್ಪಿಸಿಕೊಡಬೇಕು ತಾಕೀತು ಮಾಡಿದರು.
ತಹಸೀಲ್ದಾರ್ ವೈ.ಎಂ. ರೇಣುಕುಮಾರ್ ಮಾತನಾಡಿ, ಸಕಾಲ ಸೇವೆಯಲ್ಲಿ ಸಕಲೇಶಪುರ ಉಪ ವಿಭಾಗದಲ್ಲಿ ಕೊಣನೂರು ಕಂದಾಯ ವೃತ್ತವು ಕಳೆದ 8 ತಿಂಗಳಿನಿAದಲೂ ಪ್ರಥಮ ಸ್ಥಾನದಲ್ಲಿದೆ. ವಿ.ಜಿ. ಕೊಪ್ಪಲು ಗ್ರಾಮದಲ್ಲಿ ಶೇ. 98 ಜನರು ಕೋವಿಡ್ ಲಸಿಕೆ ಪಡೆದಿದ್ದಾರೆ. ಅಧಿಕಾರಿಗಳು ಜನರಿಂದ ಸ್ವೀಕರಿಸಿದ ಅರ್ಜಿಗಳ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುತ್ತೇವೆ ಎಂದರು.
ವಿವಿಧ ಇಲಾಖೆಗಳಿಗೆ ಸಂಬAಧಿಸಿದ 160 ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿದ್ದು ಈ ಪೈಕಿ ಆಶ್ರಯ ಮನೆ, ನಿವೇಶನ ಕೋರಿ 116 ದಾಖಲಾದವು. 28 ಜನರಿಗೆ ವಿವಿಧ ಸಾಮಾಜಿಕ ವೇತನಗಳ ಮಂಜೂರಾತಿ ಪತ್ರ ನೀಡಲಾಯಿತು. ಒತ್ತುವರಿ ತೆರವುಗೊಳಿಸಿದ ಮೂರು ಕೆರೆಗಳ ದಾಖಲಾತಿಯನ್ನು ಪಂಚಾಯಿತಿಗೆ ಹಸ್ತಾಂತರಿಸಲಾಯಿತು. ಒಂದು ಸ್ಮಶಾನ ಜಾತದ ಮಂಜೂರಾತಿ ಪತ್ರ ನೀಡಲಾಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ. ಸ್ವಾಮಿಗೌಡ ಅವರು ಆರೋಗ್ಯ ಇಲಾಖೆ ಸಿಬ್ಬಂದಿಯೊAದಿಗೆ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ಜನರಿಗೆ ಕೋವಿಡ್ ಲಸಿಕೆ ನೀಡಿದರು.
ಗ್ರಾಪಂ ಅಧ್ಯಕ್ಷೆ ಸುಮತಿ ರಾಜೇಗೌಡ, ಉಪಾಧ್ಯಕ್ಷ ಗಣೇಶ್, ತಾ.ಪಂ ಇಒ ಎನ್. ರವಿಕುಮಾರ್, ಬಿಇಒ ಮನಮೋಹನ್, ಸಿಪಿಐ ಸತ್ಯನಾರಾಯಣ, ತೋಟಗಾರಿಕೆ ಸಹಾಯಕ ನಿರ್ದೇಶಕ ರಾಜೇಶ್, ಕೃಷಿ ಸಹಕಾಯ ನಿರ್ದೇಶಕ ರಮೇಶ್ ಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರಿಪ್ರಸಾದ್, ರಾಜೇಂದ್ರ, ಮಂಜುನಾಥ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಇದ್ದರು.
ಸಂಪಾದಕ ರವಿ
0 Comments