ಅರಕಲಗೂಡು: ಆಕಾಲಿಕ ಮಳೆಯಿಂದ ಬೆಳೆ ಹಾನಿ ಕುರಿತು ಪ್ರತಿ ಹಳ್ಳಿಗಳಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ರಾಮನಾಥಪುರ ರಾಜಸ್ವ ನಿರೀಕ್ಷಕ ಸಿ. ಸ್ವಾಮಿ ತಿಳಿಸಿದರು.
ತಾಲೂಕಿನ ಬಸವಾಪಟ್ಟಣದಲ್ಲಿ ಬೆಳೆ ಹಾನಿ ವೀಕ್ಷಿಸಿ ಮಾತನಾಡಿದ ಅವರು, ಸತತವಾಗಿ ಬೀಳುತ್ತಿರುವ ಮಳೆಯಿಂದ ರಾಗಿ, ಮುಸುಕಿನ ಜೋಳ, ಶುಂಠಿ, ಭತ್ತ, ಹೂವು ಅಡಿಕೆ, ತೋಟದ ಬೆಳೆಗಳು ನಾಶವಾಗಿವೆ.
ಜಿಲ್ಲಾಧಿಕಾರಿ ಮತ್ತು ತಹಸೀಲ್ದಾರ್ ಆದೇಶದನ್ವಯ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕಂದಾಯ ಇಲಾಖಾ ಸಿಬ್ಬಂದಿ ಜಂಟಿಯಾಗಿ ಬೆಳೆ ಹಾನಿ ಸಮೀಕ್ಷೆ ನಡೆಸಲಾಗುತ್ತಿದೆ. ಬೆಳೆ ಹಾನಿ ವರದಿ ಸಿದ್ದಪಡಿಸಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ತೋಟಗಾರಿಕೆ ಇಲಾಖಾ ಸಿಬ್ಬಂದಿ ತಾರಾನಾಥ್ ಕೃಷಿ ಇಲಾಖಾ ಸಿಬ್ಬಂದಿ ಲೋಕೇಶ್, ಗ್ರಾಮಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಹಾಜರಿದ್ದರು.
0 Comments