ಅರಕಲಗೂಡು ಕಾಂಗ್ರೆಸ್ ೧.೫ ಲಕ್ಷ ಸದಸ್ಯತ್ವ ನೋಂದಣಿಗೆ ಚಾಲನೆ; ಮುಖಂಡರು ಗುರಿ ತಲುಪುವ ವಿಶ್ವಾಸ

ಅರಕಲಗೂಡು: ತಾಲೂಕಿನಲ್ಲಿ ಕಾಂಗ್ರೆಸ್ ಸಂಘಟನೆ ಸದೃಢಗೊಳಿಸುವ ನಿಟ್ಟಿನಲ್ಲಿ ಒಂದು ಲಕ್ಷಕ್ಕೂ ಅಧಿಕವಾಗಿ ಪಕ್ಷದ ಸದಸ್ಯತ್ವ ನೊಂದಣಿ ಆಂದೋಲನಕ್ಕೆ ಚಾಲನೆ ನೀಡಲಾಗಿದೆ ಎಂದು ತಾಲೂಕು ಬಾಕ್ಲ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ತಿಳಿಸಿದರು.

ಪಟ್ಟಣದ ಸಿಂಗಪಟ್ಟಲಮ್ಮ ಕಾಂಪ್ಲೆಕ್ಸ್ನಲ್ಲಿ ಶನಿವಾರ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಜನ್ಮದಿನ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಆಂದೋಲನಕ್ಕೆ ಪಕ್ಷದ ವರಿಷ್ಠರು ಸೂಚನೆಗೆ ಮೇರೆಗೆ ಚಾಲನೆ ನೀಡಲಾಗಿದೆ. ಅದರಂತೆ ತಾಲೂಕಿನ ಎಲ್ಲಾ ಹೋಬಳಿಗಳಲ್ಲಿ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸದಸ್ಯತ್ವ ಆಂದೋಲನ ಹಮ್ಮಿಕೊಳ್ಳಲಾಗಿದೆ.

ಈ ಆಂದೋಲನದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ನೊಂದಣಿ ಮಾಡುವ ಗುರಿ ಹೊಂದಲಾಗಿದೆ. ಪಕ್ಷದ ಮುಖಂಡರ ಸೂಚನೆ ಮೇರೆಗೆ ನಿರಂತರವಾಗಿ ಸಾರ್ವಜನಿಕರು ಶುಲ್ಕ ಭರಿಸಿ ಸ್ವಯಂ ಪೇರಿತವಾಗಿ ನೊಂದಣಿಯಾಗುತ್ತಿದ್ದಾರೆ ಎಂದು ತಿಳಿಸಿದರು. 

ಕೆಪಿಸಿಸಿ ಸದಸ್ಯ ಎಚ್.ಟಿ. ಮಂಜುನಾಥ, ಕಾಂಗ್ರೆಸ್ ಮುಖಂಡರಾದ ಡಾ. ದಿನೇಶ್ ಭೈರೇಗೌಡ, ಗಣೇಶ್ ವೇಲಾಪುರಿ, ಪಟ್ಟಣ ಪಂಚಾಯತಿ ಸದಸ್ಯರಾದ ಸುಭಾನ್ ಷರೀಫ್, ಅನಿಕೇತನ್, ಅಬ್ದುಲ್ ಭಾಷಿದ್, ಮಾಜಿ ಉಪಾಧ್ಯಕ್ಷ ಸಲೀಂ ಇತರರಿದ್ದರು.

Post a Comment

0 Comments