ಶಿರದನಹಳ್ಳಿ ಪ್ರಸಿದ್ದ ಶ್ರೀ ಶನಿದೇವರ ಉತ್ಸವ ವೈಭವ

ರಾಮನಾಥಪುರ: ಇಲ್ಲಿನ ಶಿರದನಹಳ್ಳಿಯ ಪ್ರಸಿದ್ಧ ಶ್ರೀ ಶನೇಶ್ವರಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಲಕ್ಷ ದೀಪೋತ್ಸವ ಅತ್ಯಂತ ಶ್ರದ್ಧಾ ಭಕ್ತಿಯಿಂದ ಜರುಗಿತು.

ದೇವಸ್ಥಾನದಲ್ಲಿ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ದೇವರ ಮೂಲ ವಿಗ್ರಹಕ್ಕೆ ಅಭಿಷೇಕ, ಪೂಜೆ ಹೋಮ ಸಲ್ಲಿಸಲಾಯಿತು. ಮಧ್ಯಾಹ್ನ ದೇವರ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕೂರಿಸಿ ಸುತ್ತಲಿನ ಗ್ರಾಮಗಳಲ್ಲಿ ಉತ್ಸವ ನಡೆಸಲಾಯಿತು. ಭಕ್ತರು ಈಡುಗಾಯಿ ಒಡೆದು ಭಕ್ತಿ ಸಮರ್ಪಿಸಿದರು.

ದೇವರ ಮೂರ್ತಿಗೆ ಹೂವಿನಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಸಂಜೆ ಅಪಾರ ಭಕ್ತರು ದೇವಸ್ಥಾನದಲ್ಲಿ ನಡೆದ ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು. ಮಹಾಮಂಗಳಾರತಿ ನಂತರ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

Post a Comment

0 Comments