ಅರಕಲಗೂಡು: ತಾಲೂಕಿನ ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ 73ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ಗ್ರಾಪಂ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದಲ್ಲಿ ಸಂವಿಧಾನ ಅಂಗೀಕರವಾದ ನಂತರ ಹಲವಾರು ಮಹತ್ತರವಾದ ಅಭಿವೃದ್ಧಿ ಕಾರ್ಯಗಳು ಸಾಗಿವೆ. ಮುಖ್ಯವಾಗಿ
ಪ್ರಪಂಚದಲ್ಲೇ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ರಾಷ್ಟ್ರದಲ್ಲಿ ಅಂಬೇಡ್ಕರ್ ರಚಿಸಿರುವ ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಕಾನೂನು ರೂಪಿಸಿ ಸಾಮಾಜಿಕ ನ್ಯಾಯ ಕಲ್ಪಿಸಲಾಗಿದೆ ಎಂದರು.
ಸದಸ್ಯರಾದ ವೇದ, ಸುಮಿತ್ರ, ಯಶೋಧಮ್ಮ, ಪೂಜಾ, ನಾಗರಾಜ್, ತಿಮ್ಮಯ್ಯ, ಪ್ರಕಾಶ್, ಯೋಗೇಶ್, ಚಂದ್ರೇಗೌಡ, ಪಿಡಿಒ ರಂಗಸ್ವಾಮಿ, ಸಿಬ್ಬಂದಿ ಹಾಜರಿದ್ದು ಗಾಂಧೀಜಿ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
0 Comments