ಅರಕಲಗೂಡು: ರಾಯಚೂರಿನಲ್ಲಿ ನ್ಯಾಯಾಧೀಶರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಂವಿಧಾನಶಿಲ್ಪಿ ಡಾ. ಅಂಬೇಡ್ಕರ್ ಅವರಿಗೆ ಅಗೌರವ ತೋರಿಸಿ ಅಪಮಾನ ಎಸಗಿರುವ ಕೃತ್ಯ ಖಂಡನೀಯ ಎಂದು ಆರೋಪಿಸಿ ಪಟ್ಟಣದಲ್ಲಿ ಗುರುವಾರ ವಕೀಲರು ಪ್ರತಿಭಟನೆ ನಡೆಸಿದರು.
ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದಿಂದ ತೆರಳಿದ ವಕೀಲರು ತಾಲೂಕು ಕಚೇರಿ ಅವರಣದಲ್ಲಿ ಜಮಾಯಿಸಿ ಧರಣಿ ಕುಳಿತು ನ್ಯಾಯಾಧೀಶರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಬುಧವಾರ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಅಂಬೇಡ್ಕರ್ ಭಾವಚಿತ್ರ ಇರಿಸುವ ಸಂಬAಧ ಅಗೌರವವಾಗಿ ವರ್ತಿಸಿರುವುದು ಸರಿಯಲ್ಲ. ಇವರ ದುರ್ವತನೆ ನ್ಯಾಯಾಧೀಶರ ಸ್ಥಾನಕ್ಕೆ ಅರ್ಹರಲ್ಲ. ಸಂವಿಧಾನ ಬಾಹಿರ ಕೃತ್ಯ ಎಸಗಿರುವ ಇವರನ್ನು ಸೇವೆಯಿಂದ ವಜಾಗೊಳಿಸಿ ರಾಷ್ಟçದ್ರೋಹ ಪ್ರಕರಣ ದಾಖಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಗ್ರೇಡ್- 2 ತಹಸೀಲ್ದಾರ್ ಮೋಹನ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ವಕೀಲರ ಸಂಘದ ಅಧ್ಯಕ್ಷ ಗೋವಿಂದ, ಕಾರ್ಯದರ್ಶಿ ದೊರೆಸ್ವಾಮಿ, ವಕೀಲರಾದ ಬಿ.ಸಿ. ರಾಜೇಶ್, ಜಿ.ಜಿ. ರವಿ, ಜಿ.ಡಿ. ಮಹೇಶ್, ರಾಜಶೇಖರ, ಶ್ರೀಧರ್, ಲೋಕೇಶ್, ಸಂತೋಷ್, ಎಸ್.ಆರ್. ನಾಗರಾಜ್, ಎಸ್.ಟಿ. ಪ್ರಕಾಶ್ ಪಾಲ್ಗೊಂಡಿದ್ದರು.
0 Comments