ನ್ಯಾಯಾಧೀಶರ ಶಿಕ್ಷೆಗೆ ಕಪ್ಪು ಪಟ್ಟಿ ಧರಿಸಿ ಕಂದಾಯ ಇಲಾಖೆ ನೌಕರರು ಅಧಿಕಾರಿಗಳ ಪ್ರತಿಭಟನೆ

ಅರಕಲಗೂಡು: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ತೆಗೆಸಿ ಸಂವಿಧಾನಕ್ಕೆ ಅವಮಾನ ಮಾಡಿರುವುದನ್ನು ಖಂಡಿಸಿ ಪಟ್ಟಣದಲ್ಲಿ ತಾಲೂಕು ಕಚೇರಿ ಸಿಬ್ಬಂದಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಶುಕ್ರವಾರ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ತಾಲೂಕು ಕಂದಾಯ ಇಲಾಖೆಯ ನೌಕರರ ಸಂಘದ ಉಪಾಧ್ಯಕ್ಷ ಸಿ. ಸ್ವಾಮಿ ಮಾತನಾಡಿ, ಭಾರತ ಸಂವಿಧಾನ ರಚಿಸಿದ ಅಂಬೇಡ್ಕರ್ ವಿಶ್ವದ ಶ್ರೇಷ್ಠ ನಾಯಕರಾಗಿದ್ದಾರೆ. ಇದನ್ನು ಅರಿಯದೆ ಒಬ್ಬ ಜವಾಬ್ದಾರಿ ಸ್ಥಾನದಲ್ಲಿರುವ ಗೌರವಾನ್ವಿತ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅಂಬೇಡ್ಕರ್ ಭಾವಚಿತ್ರ ತೆಗೆಯುವವರೆಗೆ ಧ್ವಜಾರೋಹಣ ನಡೆಸುವುದಿಲ್ಲ ಎಂಬುದಾಗಿ ಹೇಳಿ ಭಾವಚಿತ್ರ ತೆಗೆಸಿರುವುದು ಸಂವಿಧಾನಕ್ಕೆ ಮಾಡಿರುವ ದೊಡ್ಡ ಧ್ರೋಹದ ಕೆಲಸವಾಗಿದೆ.

ಕೆಟ್ಟ ಮನಸ್ಥಿತಿಯುಳ್ಳ ಮಲ್ಲಿಕಾರ್ಜುನಗೌಡ ಹಾಗೂ ಅಲ್ಲಿನ ಸಿಬ್ಬಂದಿ ವಿರುದ್ದ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಿ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿ ತಹಸೀಲ್ದಾರ್ ಕೆ.ಆರ್. ಶ್ರೀನಿವಾಸ್ ಮಾತನಾಡಿ, ರಾಯಚೂರು ನ್ಯಾಯಾಲಯದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ದುರಷ್ಟಕರವಾದ ಸಂಗತಿಯಾಗಿದ್ದು ಈ ವಿಚಾರವಾಗಿ ಈಗಾಗಲೇ ಸರ್ಕಾರದ ವತಿಯಿಂದ ವಿಚಾರಣೆ ನಡೆಯುತಿದ್ದು ತಪ್ಪಿಸ್ಥರಿಗೆ ಶಿಕ್ಷೆ ನೀಡಲು ಸರ್ಕಾರಕ್ಕೆ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮನವಿ ನೀಡಲಾಗುವುದು ಎಂದು ತಿಳಿಸಿದರು.
ತಾಲೂಕು ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ಶಿವಕುಮಾರ್, ಶಿರೆಸ್ತೇದಾರರಾದ ನಂಜೇಗೌಡ, ಅಂಕೇಗೌಡ, ಭಾನುಪ್ರಕಾಶ್, ಗ್ರಾಮ ಲೆಕ್ಕಿಗರು, ಗಾಮ ಸಹಾಯಕರು, ಸಿಬ್ಬಂದಿ ಪಾಲ್ಗೊಂಡಿದ್ದರು.

Post a Comment

0 Comments