ಅರಕಲಗೂಡು: ರಾಮನಗರದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಗೂಂಡಾವರ್ತನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಅನಕೃ ವೃತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಸಂಸದ ಡಿ.ಕೆ.ಸುರೇಶ್ ಮತ್ತು ವಿಧಾನ ಪರಿಷತ್ ಸದಸ್ಯ ರವಿ ವಿರುದ್ದ ಘೋಷಣೆ ಕೂಗಿದರು.
ರಾಮನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಸಂಸದ ಡಿ.ಕೆ.ಸುರೇಶದ, ವಿಧಾನ ಪರಿಷತ್ ಸದಸ್ಯ ರವಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಚಿವ ಅಶ್ವಥನಾರಾಯಣ ಅವರ ಮೇಲೆ ಗೂಂಡಾಗಿರಿ ಪ್ರದರ್ಶಿಸಿ ದೌಜರ್ಜನ್ಯ ನಡೆಸಲು ಯತ್ನಿಸಿರುವುದು ಖಂಡನೀಯ. ಇದು ಇವರ ಕಾಂಗ್ರೆಸ್ ಸಂಸ್ಕೃತಿಯನ್ನ ತೋರಿಸುತ್ತದೆ. ಸರ್ಕಾರ ಇವರ ವರ್ತನೆಗೆ ಕಡಿವಾಣ ಹಾಕಬೇಕು. ಕಾಂಗ್ರೆಸ್ ಕಾರ್ಯಕರ್ತರು ಸೌಜನ್ಯ ಮೀರಿ ವರ್ತಿಸುವುದು ತರವಲ್ಲ ಎಂದು ಆರೋಪಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ, ಅರಕಲಗೂಡು ಮಂಡಲ ಪ್ರಧಾನ ಕಾರ್ಯದರ್ಶಿ ಕಾಳೇನಹಳ್ಳಿ ಸೂರ್ಯ, ಹೊಂಡರವಳ್ಳಿ ಲೋಕೇಶ್, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖಂಡೇಶ್ವರ್ ಕುಮಾರ್ , ರೈತಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೇಶವೇಗೌಡ, ಪಟ್ಟಣ ಪಂಚಾಯತಿ ಸದಸ್ಯ ನಿಖಿಲ್ ಕುಮಾರ್, ಮಜಖಂಡರಾದ ಬುಲೆಟ್ ಮಂಜು, ಚಂದು, ಚಾಮುಂಡಿ, ರಂಗ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
0 Comments