ಅರಕಲಗೂಡು: ಪಟ್ಟಣದ ಹಳೇ ತಾಲೂಕು ಕಚೇರಿ ಆವರಣದ ಬಳಿ ಒಂದು ಕೋಟಿ ರೂ ವೆಚ್ಚದಲ್ಲಿ ತಲೆಎತ್ತಿದ ಹಿಂದುಳಿದ ವರ್ಗದ ಹರಿಕಾರ ಮಾಜಿ ಸಿಎಂ ಡಿ.ದೇವರಾಜು ಅರಸು ಭವನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಲೋಕಾರ್ಪಣೆ ಮಾಡಿದರು.
ನಂತರ ಮಾತನಾಡಿ, ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ ದೆವರಾಜ ಅರಸು ಹೆಸರಿನಲ್ಲಿ ಉತ್ತಮ ಭವನ ನಿರ್ಮಾಣಗೊಂಡಿರುವುದು ಸಂತಸದ ಸಂಗತಿ ಎಂದರು.
ಅರಕಲಗೂಡು: ತಾಲ್ಲೂಕಿನಲ್ಲಿ ಪಾಲಿಟೆಕ್ನಿಕ್ ಕೇಂದ್ರ ತೆರೆಯಲು ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು.
ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಸಮಾರಂಭರದಲ್ಲಿ ಭಾಗವಹಿಸಿ ಮಾತನಾಡಿದರು. ಪಾಲಿಕ್ಲಿನಿಕ್ ಇಲ್ಲಿಗೆ ಅಗತ್ಯವಾಗಿ ಬೇಕಾಗಿದೆ. ಈ ಕುರಿತು ಸಚಿವರೊಂದಿಗೆ ಚರ್ಚಿಸಿ ವಿಶೇಷ ಗಮನ ಹರಿಸಲಾಗುವುದು ಎಂದರು.
ಕಶಾಸಕ ಎ.ಟಿ.ರಾಮಸ್ವಾಮಿ ,ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಪಂ ಸಿಇಒ ಕಾಂತರಾಜ್, ಎಸ್ ಪಿ ಶ್ರೀನಿವಾಸ್ ಗೌಡ, ತಾಪಂ ಅಧ್ಯಕ್ಷ ಹೂವಣ್ಣ, ಉಪಾಧ್ಯಕ್ಷೆ ಲಕ್ಷ್ಮೀ, ಸದಸ್ಯರಾದ ಗೀತಾ, ರಶ್ಮಿ, ಮಾಜಿ ಸದಸ್ಯ ಎನ್. ರವಿಕುಮಾರ್, ಶಶಿಕುಮಾರ್, ತಹಶೀಲ್ದಾರ್ ಕೆ.ಆರ್.ಶ್ರೀನಿವಾಸ್, ಪಶುಪಾಲನಾ ಇಲಾಖೆಯ ಡಾ.ಕೆ.ಆರ್. ರಮೇಶ್, ಡಾ .ಸುಂದರೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಹಾಕಪ್ಪ ಲಮಾಣಿ ಉಪಸ್ಥಿತರಿದ್ದರು.
0 Comments