ಅರಕಲಗೂಡು: ಗ್ರಾಮೀಣಾಭಿವೃಧ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಾಜಾ ಗೊಳಿಸುವಂತೆ ಆಗ್ರಹಿಸಿ ಕಾಂಗ್ರಸ್ ಕಾರ್ಯಕರ್ತರು ಪಟ್ಟಣದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರವಾಸಿ ಮಂದಿರದಿAದ ಮೆರವಣಿಗೆಯಲ್ಲಿ ಹೊರಟ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅನಕೃ ವೃತ್ತದಲ್ಲಿ ಜಮಾಯಿಸಿ ಸಭೆ ನಡೆಸಿದರು.
ದಕ್ಷಿಣ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಮಾತನಾಡಿ, ಅನಗತ್ಯವಾದ ವಿಚಾರಗಳನ್ನು ಪ್ರಚೋಧಿಸಿ ಜನವಿರೋಧಿಯಾಗಿ ವರ್ತಿಸುತ್ತಿರುವ ಬಿಜೆಪಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿö್ಯಸುತ್ತಿದೆ. ಇದೀಗ ಸಚಿವ ಈಶ್ವರಪ್ಪ ಅವರು ಜವಾಬ್ದಾರಿ ಮರೆತು ವರ್ತಿಸುತ್ತಿದ್ದಾರೆ. ಸಂವಿಧಾನಕ್ಕೆ ಅಪಚಾರ ಮಾಡಿರುವ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಾವಗಲ್ ಮಂಜುನಾಥ್ ಮಾತನಾಡಿ, ರಾಷ್ಟ್ರ ಧ್ವಜದ ಕುರಿತು ಸಚಿವ ಈಶ್ವರಪ್ಪ ನೀಡಿರುವ ಹೇಳಿಕೆ ಸಂವಿಧಾನ ಹಾಗೂ ರಾಷ್ಟ್ರ ವಿರೋಧಿಯಾಗಿದೆ. ಇವರನ್ನು ಸಚಿವ ಸಂಪುಟದಿAದ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರೂ ವಿಧಾನ ಮಂಡಲದ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕರೆಯಂತೆ ಜಿಲ್ಲೆಯ ಎಲ್ಲ ನಾಯಕರೂ, ಪಕ್ಷದ ಕಾರ್ಯಕರ್ತರು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸಂವಿಧಾನಕ್ಕೆ ಅಪಮಾನ ಮಾಡಿರುವ ಈಶ್ವರಪ್ಪ ರಾಜೀನಾಮೇ ನೀಡುವವರೆಗೂ ಈ ಹೋರಾಟ ನಡೆಯಲಿದೆ. ಮುಖ್ಯಮಂತ್ರಿಗಳು ಕೂಡಲೆ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿAದ ವಜಾ ಮಾಡುವ ಮೂಲಕ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಲು ಮುಂದಾಗಬೇಕು ಎಂದು ಆಗ್ರಹಿಸಿದರು.
ತಾಲೂಕು ಬ್ಲಾಕ್ ಕಾಂಗ್ರಸ್ ಘಟಕದ ಅಧ್ಯಕ್ಷ ಎಸ್.ಎಸ್. ಪ್ರಸನ್ನ ಕುಮಾರ್, ಮುಖಂಡರಾದ ಎಂ.ಟಿ. ಕೃಷ್ಣೇಗೌಡ, ಡಾ. ದಿನೇಶ್ ಭೈರೇಗೌಡ, ಶ್ರೀಧರ್‌ಗೌಡ, ಎಂ.ಕೆ. ಶೇಷೇಗೌಡ, ಗಣೇಶ್ ವೇಲಾಪುರಿ ಮಾತನಾಡಿದರು. ನಂತರ ಮೆರವಣಿಗೆಯಲ್ಲಿ ತಾಲೂಕು ಕಚೇರಿಗೆ ಧಾವಿಸಿದ ಪ್ರತಿಭಟನಾ ಕಾರರು ಬಿಜೆಪಿ ಸರ್ಕಾರ ಹಾಗೂ ಈಶ್ವರಪ್ಪ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ಕೆ.ಆರ್. ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿದರು.
ಪಪಂ ಅಧ್ಯಕ್ಷ ಅಬ್ದುಲ್ ಬಾಸಿತ್, ಸದಸ್ಯರಾದ ಅನಿಕೇತನ್, ಸುಬಾನ್ ಷರೀಪ್, ಪ್ರದೀಪ್ ಕುಮಾರ್, ಕೆಪಿಸಿಸಿ ಸದಸ್ಯ ಎಚ್.ಟಿ. ಮಂಜುನಾಥ್, ತಾಲೂಕು ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸಂತೋಷ್ ಶಣವಿನಕುಪ್ಪ, ಹೊನ್ನವಳ್ಳಿ ಶೆಟ್ಟಿಗೌಡ, ಪಪಂ ಮಾಜಿ ಅಧ್ಯಕ್ಷ ಸಲೀಂ ಅಹಮದ್, ಸಾಲಗೊಪ್ಪಲು ರಾಜು, ರಾಮೇಗೌಡ, ಜಮೀರ್ ಪಾಷಾ, ಶಾಬಾಜ್ ಪಾಲ್ಗೊಂಡಿದ್ದರು.
0 Comments