ಲಕ್ಕೂರು: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಿ. ಸ್ವಾಮಿ ಸಾಂತ್ವನ

ಅರಕಲಗೂಡು: ತಾಲೂಕಿನ ಲಕ್ಕೂರು ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತ ಮಂಜುನಾಥ್ ಮನೆಗೆ ರಾಮನಾಥಪುರ ರಾಜಸ್ವ ನಿರೀಕ್ಷಕ ಸಿ. ಸ್ವಾಮಿ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು.

ಮೃತ ಮಂಜುನಾಥ್ ಅವರು 2. 80 ಲಕ್ಷ ರೂ ಅನ್ನು ಬ್ಯಾಂಕ್ ಮತ್ತು ಕೈ ಸಾಲ ಮಾಡಿದ್ದು ಬೆಳೆಗಳು ಕೈಗೆ ಹತ್ತದೆ, ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆಗೆ ಶರಣಾಗಿ ಸೋಮವಾರ ಮೃತಪಟ್ಟಿದ್ದರು. ಮೃತನ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು.

ಶಿರೆಸ್ತೇದಾರ್ ಭಾನುಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯ ಹಿರಣ್ಯಕುಮಾರ್,  ಗ್ರಾಮ ಲೆಕ್ಕಾಧಿಕಾರಿ ಮಧುಕುಮಾರ್ , ಗ್ರಾಮಸಹಾಯಕ ಮೋಹನ್ ಇದ್ದರು.

Post a Comment

0 Comments