ಅರಕಲಗೂಡು: ಆಹಾರ ಗೋದಾಮಿಗೆ ಸಚಿವ ಕೆ. ಗೋಪಾಲಯ್ಯ ಭೇಟಿ

ಅರಕಲಗೂಡು:  ಅಕ್ಷರ ದಾಸೋಹ ಯೋಜನೆಗೆ  ಕಳಪೆ ಅಹಾರ ಪದಾರ್ಥ ಸರಭರಾಜು ಮಾಢಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಸಚಿವ ಕೆ. ಗೋಪಾಲಯ್ಯ ಶಾಸಕ  ಎ.ಟಿ.ರಾಮಸ್ವಾಮಿ ಅವರೊಂದಿಗೆ ಆಹಾರ  ಇಲಾಖೆಯ ಗೋದಾಮಿಗೆ ಭೇಟಿ ನೀಡಿ ಪರಿಶೀಲಿಸಿದರು. 

ಸರಭರಾಜಾಗಿದ್ದ ತೊಗರಿ  ಬೇಳೆಯನ್ನು ಪರಿಶೀಲಿಸಿದ  ಅವರು ಅಧಿಕಾರಿಗಳಿಂದ  ಮಾಹಿತಿ ಪಡೆದರು. ಆಹಾರ ಪದಾರ್ಥಗಳ ಗುಣಮಟ್ಟ ಪರೀಕ್ಷಗೆ  ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ  ಸೂಚಿಸಿದರು.  

ಆಹಾರ ಪದಾರ್ಥಗಳ ಗುಣಮಟ್ಟ ಕುರಿತು ಯಾವುದೇ ರಾಜಿಇಲ್ಲ, ಗುಣಮಟ್ಟ ಸರಿ ಇಲ್ಲದಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪ್ರಯೋಗಾಲಯಕ್ಕೆ ಕಳಿಸಿದ್ದು ವರದಿ ಆಧರಿಸಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದರು.

Post a Comment

0 Comments