ಅರಕಲಗೂಡಿಗೆ ಪಾಲಿಕ್ಲಿನಿಕ್ ‌ತರುವುದಾಗಿ ಕೆ. ಗೋಪಾಲಯ್ಯ ಭರವಸೆ ಕೊಟ್ರು

ಅರಕಲಗೂಡು:  ತಾಲ್ಲೂಕಿನಲ್ಲಿ ಪಾಲಿಟೆಕ್ನಿಕ್ ಕೇಂದ್ರ ತೆರೆಯಲು  ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು. 

ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಸಮಾರಂಭರದಲ್ಲಿ ಭಾಗವಹಿಸಿ ಮಾತನಾಡಿದರು. ಪಾಲಿಕ್ಲಿನಿಕ್ ಇಲ್ಲಿಗೆ ಅಗತ್ಯವಾಗಿ ಬೇಕಾಗಿದೆ. ಈ ಕುರಿತು ಸಚಿವರೊಂದಿಗೆ ಚರ್ಚಿಸಿ ವಿಶೇಷ ಗಮನ ಹರಿಸಲಾಗುವುದು ಎಂದರು.

ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿದ್ದ ಶಾಸಕ ಎ.ಟಿ.ರಾಮಸ್ವಾಮಿ ಮಾತನಾಡಿದರು.
 ವಿಧಾನ ಪರಿಷತ್ ಸದಸ್ಯ ಡಾ. ಸೂರಜ್  ರೇವಣ್ಣ ಮಾತನಾಡಿದರು. ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಪಂ  ಸಿಇಒ ಕಾಂತರಾಜ್, ಎಸ್ ಪಿ ಶ್ರೀನಿವಾಸ್ ಗೌಡ, ತಾಪಂ ಅಧ್ಯಕ್ಷ ಹೂವಣ್ಣ,  ಉಪಾಧ್ಯಕ್ಷೆ ಲಕ್ಷ್ಮೀ, ಸದಸ್ಯರಾದ ಗೀತಾ, ರಶ್ಮಿ, ತಹಶೀಲ್ದಾರ್ ಕೆ.ಆರ್.ಶ್ರೀನಿವಾಸ್, ಪಶುಪಾಲನಾ ಇಲಾಖೆಯ ಡಾ.ಕೆ.ಆರ್. ರಮೇಶ್, ಡಾ .ಸುಂದರೇಶ್,  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಹಾಕಪ್ಪ ಲಮಾಣಿ ಉಪಸ್ಥಿತರಿದ್ದರು.

Post a Comment

0 Comments