ಅರಕಲಗೂಡು: ಪಟ್ಟಣದ ವಿವಿಧಡೆ ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್ ಗುರುವಾರ ಮತ ಯಾಚಿಸಿದರು.
ಜೆಎಂಎಫ್ಸಿ ನ್ಯಾಯಾಲಯ, ಪೊಲೀಸ್ ಠಾಣೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತ ಯಾಚನೆ ಮಾಡಿದರು.
ಬಿಜೆಪಿ ಮುಖಂಡ ಎಚ್. ಯೋಗಾ ರಮೇಶ್ ಪಟ್ಟಣದ ಕೋರ್ಟ್ ಹಾಲ್ ಬಳಿ ಅಭ್ಯರ್ಥಿ ಪರ ಮತ ಯಾಚನೆ ಮಾಡಿ ಮಾತನಾಡಿ, ಮಾತನಾಡಿ, ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್ ಈ ಬಾರಿ ಗೆಲುವು ಸಾಧಿಸುವುದು ನಿಶ್ಚಿತ. ಮತ ಯಾಚನೆ ವೇಳೆ ವ್ಮತದಾರರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ರವಿಶಂಕರ್ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.
ಬಿಜೆಪಿ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮತ ಯಾಚನೆಗೆ ಸಹಕರಿಸುತ್ತಿದ್ದಾರೆ ಎಂದರು.
ತಾಲೂಕು ಬಿಜೆಪಿ ಅಧ್ಯಕ್ಷ ವಿಶ್ವನಾಥ್, ಮಾಜಿ ಅಧ್ಯಕ್ಷ ಕೆಶವೇಗೌಡ, ಪ್ರಧಾನ ಕಾರ್ಯದರ್ಶಿ ಸೂರ್ಯ, ಲೋಕೇಶ್, ವಕೀಲ ಎಂ.ಟಿ. ಸತ್ಯನಾರಾಯಣ, ತಾಲೂಕು ಎಸ್ಸಿ ಮೋರ್ಚಾ ಅಧ್ಯಕ್ಷ ವಿಜಯಕುಮಾರ್, ಖಂಡೇಶ್ವರ್, ಸ್ವಾಮಿಗೌಡ, ಚಂದು, ರಾಮಣ್ಣ ಇನ್ನಿತರೆ ಪ್ರಮುಖರು ಇದ್ದರು.
0 Comments