ಅರಕಲಗೂಡು: ತಾಲೂಕಿನ ಮಲ್ಲಿಪಟ್ಟದಲ್ಲಿ ಭಾನುವಾರ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮ ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು.
ಕಾರ್ಯಕ್ರಮದಲ್ಲಿ ಅಪಾರ ಭಕ್ತರು ಉತ್ಸಾಹದಿಂದ ಭಾಗವಹಿಸಿದ್ದು ಶ್ರೀಗಳಿಗೆ ನಮನ ಸಲ್ಲಿಸಿದರು.
ಸರ್ಕಲ್ ನಲ್ಲಿ ಶಾಮೀಯಾನ ಹಾಕಿ ಹೂವಿನ ಅಲಂಕೃತ ಸಭಾಂಗಣದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಭಾವಚಿತ್ರ ಇಟ್ಟು ಪೂಜಾ ಕೈಂಕರ್ಯಗಳನ್ನು ವಿಧಿವತ್ತಾಗಿ ಪೂರೈಸಲಾಯಿತು.
ಪೂಜಾ ಕಾರ್ಯದಲ್ಲಿ ಸ್ಥಳೀಯರಲ್ಲದೆ ಸುತ್ತಲಿನ ಹಳ್ಳಿಗಳ ಭಕ್ತರು ಭಾಗಿಯಾಗಿ ಶ್ರೀಗಳ ಕೃಪೆಗೆ ಪಾತ್ರರಾದರು.
ಭಕ್ತರಿಗೆ ಸಾಮೂಹಿಕ ಅನ್ನ ದಾಸೋಹ ನಡೆಯಿತು. ಪೌರ ಕಾರ್ಮಿಕರಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು.
ಅಧಿತಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸುರೇಶ್, ಇನ್ನಿತರೆ ಗಣ್ಯರು ಇದ್ದರು.
0 Comments