ಬಾಗ್ದಾಳ್ ಬಸವೇಶ್ವರ ದೇವಾಲಯ ಲೋಕಾರ್ಪಣೆ: ಆದಿ ಚುಂಚನಗಿರಿ ಶ್ರೀ ಶಂಭುನಾಥ ಸ್ವಾಮೀಜಿ ಸಾನಿಧ್ಯ

ಅರಕಲಗೂಡು: ಮನುಕುಲಕ್ಕೆ ಒಳಿತಾಗುವ ನಿಟ್ಟಿನಲ್ಲಿ ಪುಣ್ಯದ ಕಾರ್ಯಗಳನ್ನು ಕೈಗೊಂಡು ಭಕ್ತಿ ಮಾರ್ಗದಲ್ಲಿ ಸಾಗಿದರೆ ದೇವರ ಅನುಗ್ರಹ ಪ್ರಾಪ್ತಿಯಾಗಲಿದೆ ಎಂದು ಹಾಸನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ನುಡಿದರು.

ತಾಲೂಕಿನ ಬಾಗ್ದಾಳ್ ಗ್ರಾಮದಲ್ಲಿ ಶುಕ್ರವಾರ ನಡೆದ ಶ್ರೀ ಬಸವೇಶ್ವರ ದೇವಸ್ಥಾನ ಉದ್ಘಾಟನಾ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ದೇವರು ಮನುಷ್ಯನಿಗೆ ಜ್ಞಾನದ ಅರಿವು ನೀಡಿದ್ದು ಇದನ್ನು ಸಮಾಜಮುಖಿ ಸೇವಾ ಕಾರ್ಯಗಳಿಗಾಗಿ ಸದ್ವಿನಿಯೋಗ ಪಡಿಸಿಕೊಳ್ಳುವ ಸಂಕಲ್ಪ ಮಾಡಬೇಕು. ಸಕಲ ಜೀವಿಗಳಿಗೂ ಒಳಿತಾಗುವಂತಹ ಉತ್ತಮ ಕಾರ್ಯಗಳನ್ನು ಮಾಡಿ ದೈವ ಕೃಪೆಗೆ ಪಾತ್ರರಾದರೆ ಬದುಕಿನಲ್ಲಿ ಸಾರ್ಥಕ್ಯತೆ ಕಂಡುಕೊಳ್ಳಬಹುದು ಎಂದರು.

ಕೆಸವತ್ತೂರು ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿ, ಮಕ್ಕಳಿಗೆ ಚಿಕ್ಕಂದಿನಿAದಲೇ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರವನ್ನು ನೀಡಿದರೆ ಭವಿಷ್ಯದ ಸಮಾಜಕ್ಕೆ ಬೆಳಕಾಗಲಿದ್ದಾರೆ. ಗ್ರಾಮೀಣ ಭಾಗದಲ್ಲಿ ದೇವಸ್ಥಾನಗಳನ್ನು ಸ್ಥಾಪಿಸಿ ಪೂಜಿಸಿದರೆ ಜನರ ಮನ ಮನೆಗಳಲ್ಲಿ ಶಾಂತಿ, ನೆಮ್ಮದಿ ನೆಲೆಸಿ ಜೀವಮಾನದ ಸಾಧನೆಗಳಲ್ಲಿ ಯಶಸ್ಸು ಕಾಣಬಹುದು ಎಂದು ಹೇಳಿದರು.

ದೊಡ್ಡ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಿ, ಧಾರ್ಮಿಕ ಕಾರ್ಯಗಳು ಮನುಷ್ಯನಲ್ಲಿ ಆತ್ಮಸೆüöÊರ್ಯ ವೃದ್ದಿಸುತ್ತವೆ. ತಂದೆ ತಾಯಿ ಗುರು ಹಿರಿಯರಿಗೆ ಗೌರವ ಸಲ್ಲಿಸುವ ಮನೋಧರ್ಮವನ್ನು ಬೆಳೆಸಿಕೊಂಡರೆ ಸಾಮರಸ್ಯದ ಜೀವನ ಸಾಗಿಸಬಹುದು ಎಂದರು.

ಶಾಸಕ ಎ.ಟಿ. ರಾಮಸ್ವಾಮಿ, ಮಾಜಿ ಸಚಿವ ಎ. ಮಂಜು, ಕಾಂಗ್ರೆಸ್ ಮುಖಂಡ ಎಂ.ಟಿ. ಕೃಷ್ಣೇಗೌಡ, ನಿವೃತ್ತ ಇಂಜಿನಿಯರ್ ಮರಡಿ ಸೋಮಶೇಖರ್, ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ, ಕಾಂತರಾಜು, ಹರೀಶ, ಪ್ರಭಾಕರ, ಚಂದ್ರಶೇಖರ, ರಾಜು, ಕುಮಾರ್, ನಟೇಶ, ರಾಜೇಶ್, ಹೊಳಲಗೋಡು ಗ್ರಾಪಂ ಅಧ್ಯಕ್ಷ ಸೋಮಶೇಖರ್ ಇತರರು ಇದ್ದರು.

ಆಗಮಿಕರಾಗಿದ್ದ ಕೆ.ಎಸ್. ದಿನೇಶ್ ಶಾಸ್ತಿç ಅವರ ಸಂಗಡಿಗರಿಂದ ದೇವಸ್ಥಾನದಲ್ಲಿ ವಿವಿಧ ಪ್ರಜಾ ಕೈಂಕರ್ಯಗಳು ವಿಧಿವತ್ತಾಗಿ ನಡೆದವು. ಅಪಾರ ಭಕ್ತರು ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಭಕ್ತರಿಗೆ ಸಾಮೂಹಿಕ ಅನ್ನ ದಾಸೋಹ ನಡೆಯಿತು.

Post a Comment

0 Comments