ಅರಕಲಗೂಡು: ದೇಶದೆಲ್ಲೆಡೆ ಜನತೆ ಅಂಬೇಡ್ಕರ್ ಜಯಂತಿ ಆಚರಿಸಿ ಸಂವಿಧಾನ ಶಿಲ್ಪಿಯ ಸ್ಮರಣೆಯಲ್ಲಿ ನಿರತರಾಗಿದ್ದಾರೆ. ಆದರೆ, ತಾಲೂಕಿನ ಹೊಳಲಗೋಡು ಗೋರಿ ಸರ್ಕಲ್ ನಲ್ಲಿ ಅಂಬೇಡ್ಕರ್ ಕಟೌಟ್ ಗೆ ಬೆಂಕಿ ಹಚ್ಚಿ ಅವಮಾನಿಸಲಾಗಿದೆ.
ಅಂಬೇಡ್ಕರ್ ಜಯಂತಿಯಂದು ಗೋರಿ ಸರ್ಕಲ್ ಗೆ ಬೃಹತ್ ಕಟೌಟ್ ಅಳವಡಿಸಲಾಗಿತ್ತು. ಸೋಮವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಅಂಬೇಡ್ಕರ್ ಭಾವಚಿತ್ರ ವಿರೂಪಗೊಳಿಸಿ ಪೈಶಾಚಿಕ ಕೃತ್ಯ ಮೆರೆದಿದ್ದಾರೆ.
ಮಂಗಳವಾರ ಬೆಳಗ್ಗೆ ಅಂಬೇಡ್ಕರ್ ಕಟೌಟ್ ಬೆಂಕಿಗೆ ಬೆಂದಿರುವುದನ್ನು ಕಂಡು ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಬಂಧಿಸುವಂತೆ ಒತ್ತಾಯಿಸಿದರು.
ದುಷ್ಕರ್ಮಿಗಳು ದುರುದ್ದೇಶದಿಂದ ಬೇಕಂತಲೇ ಅಂಬೇಡ್ಕರ್ ಕಟೌಟ್ ಸುಟ್ಟಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಡಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
0 Comments