ಮೂಲೇಹೊಸಹಳ್ಳಿ ಡಿವೈಡರ್ ಗೆ ಖಾಸಗಿ ಬಸ್ ಡಿಕ್ಕಿ: ೫೫ ಪ್ರಯಾಣಿಕರು ಪಾರು

ಅರಕಲಗೂಡು: ತಾಲೂಕಿನ ಮೂಲೇಹೊಸಹಳ್ಳಿ ಗ್ರಾಮದ ಬಳಿ ಶನಿವಾರ ಸಂಜೆ ಮಾಗಡಿ - ಸೋಮವಾರಪೇಟೆ ರಾಜ್ಯ ಹೆದ್ದಾರಿ‌ ವಿಭಜಕಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಐವತ್ತೈದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಡಿಕೇರಿ ಕಡೆಯಿಂದ ರಾಮನಾಥಪುರ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಕಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಗುದ್ದಿದ ರಭಸಕ್ಕೆ ಒಂದು‌ ಭಾಗ ಡಿವೈಡರ್ ಮೇಲೆ ನಿಂತು ಜಖಂಗೊಂಡಿದೆ.

ಮಾಗಡಿ - ಸೋಮವಾರಪೇಟೆ ಮಾರ್ಗದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಮೂಲೇಹೊಸಹಳ್ಳಿ ಬಳಿ ಹೊಸದಾಗಿ‌ ಚತುಷ್ಪಥ ರಸ್ತೆ ನಿರ್ಮಾಣವಾಗಿದ್ದು ಮಧ್ಯ ಭಾಗಕ್ಕೆ ವಿಭಜಕ ಅಳವಡಿಸಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ಚಾಲಕ ಹೊಸದಾಗಿ ನಿರ್ಮಿಸಿದ್ದ ವಿಭಜಕ ಗಮನಿಸದೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಬಸ್ ನಲ್ಲಿದ್ದ ಎಲ್ಲ ಪ್ರಯಾಣಿಕರು ಬದುಕುಳಿದಿದ್ದಾರೆ.

Post a Comment

0 Comments