ಅರಕಲಗೂಡು: ಇಲ್ಲಿನ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಶಾರದಾ ಪೃಥ್ವಿರಾಜ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪಂಚಾಯಿತಿ ಸದಸ್ಯರ ವಿಶ್ವಾಸವಿಟ್ಟು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು.
ಮುಂದಿನ ದಿನಗಳಲ್ಲಿ ವಾರದಲ್ಲಿ ಒಂದು ದಿನ ವಾರ್ಡ್ ಸಭೆ ಮಾಡಲು ತೀರ್ಮಾನಿಸಲಾಗಿದ್ದು, ವಾರ್ಡ್ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಜತೆಗೆ ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಮುಖ್ಯಾಧಿಕಾರಿ ಸವಿತಾ, ಸದಸ್ಯರು, ಇತರರಿದ್ದರು.
0 Comments