ಅರಕಲಗೂಡು: ತಾಲೂಕಿನ ಹೊನ್ನವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಿಕೆಗೆ ನೆರವಾಗುವ ನಿಟ್ಟಿನಲ್ಲಿ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಎಚ್. ಯೋಗಾರಮೇಶ್ ತಿಳಿಸಿದರು.
ಪಟ್ಟಣ ಸಮೀಪದ ಹೊನ್ನವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗುರುವಾರ ನೆಲಹಾಸು ಜಮಕಾನ್ ಉಚಿತವಾಗಿ ವಿತರಿಸಿ ಮಾತನಾಡಿದ ಅವರು, ಶಾಲೆಯಲ್ಲಿ ತೊಂಬತ್ತು ಮಕ್ಕಳು ಕಲಿಯುತ್ತಿದ್ದಾರೆ. ಶಾಲೆಯಲ್ಲಿ ಕೊಠಿಗಳ ಕೊರತೆ ಕಾರಣ ಕೆಲವು ಮಕ್ಕಳು ಶಾಲಾ ಆವರಣದಲ್ಲಿ ಕುಳಿತುಕೊಳ್ಳುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಕುಳಿತುಕೊಳ್ಳಲು ಅನುಕೂಲವಾಗುವಂತೆ ಜಮಕಾನ್ ನೀಡಲಾಗಿದೆ. ಶಾಲೆಗೆ ಈ ಹಿಂದೆಯೂ ಹಲವಾರು ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
ಮುಖ್ಯ ಶಿಕ್ಷಕಿ ಲಿಂಗಮ್ಮ, ಎಸ್.ಡಿ.ಎಂ.ಸಿ. ಅಧ್ಯಕ್ಷ ನಾಗರಾಜ್, ಮುಖಂಡರಾದ ಕೇಶವೇಗೌಡ, ಗಿರೀಶ್, ಸಿದ್ದಪ್ಪ, ವೆಂಕಟಾಪತಿ ಇತರರಿದ್ದರು.
0 Comments