ಅರಕಲಗೂಡು: ತಾಲೂಕಿನ ರಾಮನಾಥಪುರದಲ್ಲಿ ಭಾನುವಾರ ರಾತ್ರಿ ಇಬ್ಬರು ದುಷ್ಕರ್ಮಿಗಳು ಕೆಆರ್‌ಎಸ್ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಕೇಶವಮೂರ್ತಿ ಅವರ ಕಾರಿನ ಗಾಜು ಒಡೆದು ಅವರ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಕೇಶವಮೂರ್ತಿ ಅವರು ಕೊಣನೂರು ಹೋಬಳಿಯಲ್ಲಿ ಪಕ್ಷದ ಪರ ಪ್ರಚಾರ ಕಾರ್ಯ ಮುಗಿಸಿ ಊರಿಗೆ ವಾಪಾಸ್ಸಾಗುವ ವೇಳೆ ರಾಮನಾಥಪುರ ಫಾರೆಸ್ಟ್ ಗೇಟ್ ಬಳಿ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಕಾರು ಅಡ್ಡಗಟ್ಟಿದ್ದಾರೆ.
ರಸ್ತೆ ಬದಿ ಕಾರು ನಿಲ್ಲಿಸುವಷ್ಟರಲ್ಲಿ ಮುಂಭಾಗದ ಗಾಜು ಒಡೆದು ಕೇಶವಮೂರ್ತಿ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಈ ಕುರಿತು ಕೇಶವಮೂರ್ತಿ ಅವರು ಕೊಣನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ರಾಜಕೀಯ ದ್ವೇಷದ ಹಿನ್ನಲೆಯಲ್ಲಿ ದುಷ್ಕರ್ಮಿಗಳು ನನ್ನ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಕೇಶವಮೂರ್ತಿ ಆರೋಪಿಸಿದ್ದಾರೆ.
0 Comments