ನಿಲುಕುಂದ; ೩೧ ಮಂದಿಗೆ ಬಗರ್ ಹುಕುಂ ಭೂಮಿ ಮಂಜೂರು; ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ

ಅರಕಲಗೂಡು: ಗ್ರಾಮೀಣ ಭಾಗದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸಿ ನೈಜ ಸಮಸ್ಯೆಗಳನ್ನು ಬಗೆಹರಿಸುವ ಕೆಲಸವನ್ನು ಅಧಿಕಾರಿ ವರ್ಗ ತುರ್ತಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನ ಹೇಳಿದರು.

ತಾಲೂಕಿನ ಮಲ್ಲಿಪಟ್ಟಣ ಹೋಬಳಿ ನಿಲಕುಂದ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಎಲ್ಲ ವರ್ಗದ ಜನರ ಶ್ರೇಯೋಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದರೂ

 ಕೆಲವೇ ಉಳ್ಳವರ ಪಾಲಾಗುತ್ತಿವೆ, ನೈಜ ಸಮಸ್ಯೆಗಳನ್ನು ಮನಗಂಡು ಗ್ರಾಮೀಣ ಭಾಗದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಸವಲತ್ತುಗಳನ್ನು ತಲುಪಿಸಲು ಸರ್ಕಾರ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಸುತ್ತಿದೆ ಎಂದರು.

ಶಾಸಕ ಎ.ಟಿ. ರಾಮಸ್ವಾಮಿ ಮಾತನಾಡಿ, ತಾಲೂಕಿನಲ್ಲಿ ಭೂ ಸರ್ವೆ ಅಧಿಕಾರಗಳ ಸಿಬ್ಬಂದಿ ಕೊರತೆ ಹೆಚ್ಚುದ್ದು ತಕ್ಷಣವೇ ಸರ್ವೆ ಸಿಬ್ಬಂದಿಗಳನ್ನು ಒದಗಿಸಿಕೊಂಡಬೇಕು ಎಂದು ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದರು.

ಭೂ ದಾಖಲೆಗಳ ಇಲಾಖೆ ಅಧಿಕಾರಿ ಹೇಮಲತಾ, ತಹಸೀಲ್ದಾರ್ ಕೆ.ಆರ್. ಶ್ರೀನಿವಾಸ್, ಶಿರಸ್ತೇದಾರ್ ಅಂಕೇಗೌಡ, ತಾಪಂ ಪಿಒ ಗಿರೀಧರ್, ಸಿಪಿಐ ರಘುಪತಿ, ತಾಲೂಕು ಸಹಾಯಕ ಕೃಷಿ ನಿರ್ದೇಶಕ ರಮೇಶ್ ಕುಮಾರ್, ತೋಟಗಾರಿಕೆ ಇಲಾಖೆ ನಿರ್ದೇಶಕ ರಾಜೇಶ್, ಹೊಳಲಗೋಡು ಗ್ರಾಪಂ ಅಧ್ಯಕ್ಷ ಸ್ವಾಮಿ, ಮಲ್ಲಿಪಟ್ಟಣ ಗ್ರಾಪಂ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಸಭೆಯಲ್ಲಿ ಮಳೆಯಿಂದ ಹಾನಿಗೊಳಗಾದ ಸಂತ್ರಸ್ಥüರಿಗೆ ಪರಿಹಾರದ ಚೆಕ್, ವಿವಿಧ ಸವಲತ್ತುಗಳ ಆದೇಶ ಪತ್ರ ವಿತರಿಸಲಾಯಿತು.

ಕಂದಾಯ ಇಲಾಖೆಗೆ ಸಂಬಂಧಿಸಿದAತೆ 50, ಗ್ರಾಮ ಪಂಚಾಯಿತಿ 30 ಹಾಗೂ ವಿವಿಧ ಇಲಾಖೆಗಳಿಗೆ ಸಂಬAಧಿಸಿದಂತೆ 85 ಅರ್ಜಿಗಳು ಸಲ್ಲಿಕೆಯಾದವು.
ತಾಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಸಾರ್ವಜನಿಕರಿಗೆ ಬಿಪಿ, ಶುಗರ್ ಪರೀಕ್ಷೆ ನಡೆಸಿದರು.

ನಿಲಕುಂದ ಗ್ರಾಮದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನ, ಭೂ ದಾಖಲೆಗಳ ಇಲಾಖೆ ಅಧಿಕಾರಿ ಹೇಮಲತಾ ಅವರು ಬಗರ್ ಹುಕುಂ ಸಮಿತಿ ಸಭೆ ನಡೆಸಿದರು. ಸಭೆಯಲ್ಲಿ 31 ಫಲಾನುಭವಿಗಳಿಗೆ ಭೂ ಮಂಜೂರಾತಿ ನೀಡಲಾಯಿತು.

Post a Comment

0 Comments