ಅರಕಲಗೂಡು: ಪಟ್ಟಣದ ಶಿಕ್ಷಕರ ಭವನದ ಎದುರು ಬಿಜೆಪಿ ಯುವಮೋರ್ಚಾ ಅರಕಲಗೂಡು ಮಂಡಲ ವತಿಯಿಂದ ಪ್ರಧಾನಿ ನರೇಂದ್ರಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಈ ಶಿಬಿರದಲ್ಲಿ ಹಲವರು ಸ್ವಯಂ ಪ್ರೇರಿತವಾಗಿ ಆಗಮಿಸಿ ರಕ್ತದಾನ ಮಾಡಿದರು.
ಇದಕ್ಕೂ ಮುನ್ನ ಬಿಜೆಪಿ ಮುಖಂಡ ಎಚ್. ಯೋಗಾರಮೇಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನರೇಂದ್ರಮೋದಿ ಅವರು ಪ್ರಧಾನಿಯಾದ ಬಳಿಕ ಹಲವು ಜನಪರ ಕೆಲಸಗಳನ್ನು ಮಾಡಿದ್ದಾರೆ.
ಜತೆಗೆ ದೇಶದ ಹೆಸರನ್ನು ವಿಶ್ವದಮಟ್ಟಕ್ಕೆ ಕೊಂಡೋಯ್ದಿದ್ದಾರೆ. ಕಾಶ್ಮೀರದಿಂದ ಕನ್ಯಾಕುಮಾರಿ ವಾರ್ತೆ ಸಮಗ್ರ ಅಭಿವೃದ್ಧಿ ಮಾಡಿದ್ದಾರೆ. ಇವರೊಬ್ಬ ಕ್ರಾಂತಿವೀರ ಪುರುಷ ಎಂದು ಹೊಗಳಿದರು.
ಕಳಂಕರಹಿತ, ಸ್ವಚ್ಛ, ದಕ್ಷ ಆಡಳಿತ ನೀಡುವ ಪ್ರಧಾನಿ ಇರುವುದು ನಮ್ಮೆಲ್ಲರ ಹೆಮ್ಮೆ ಎಂದರು.
ಮಂಡಲ ಅಧ್ಯಕ್ಷ ವಿಶ್ವನಾಥ್, ಹಿರಿಯ ಮುಖಂಡ ಕೇಶವೇಗೌಡ, ಯುವ ಮೋರ್ಚಾ ಅಧ್ಯಕ್ಷ ಚಂದು, ಪದಾಧಿಕಾರಿಗಳಿದ್ದರು.
0 Comments