ಮಲ್ಲಿಪಟ್ಟಣ; ಎಂಲ್ಸಿ ಸೂರಜ್ ರೇವಣ್ಣಗೆ ಅಧ್ಯಕ್ಷ ರಂಗಸ್ವಾಮಿ ಮನವಿ

ಅರಕಲಗೂಡು: ತಾಲೂಕಿನ ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿ ಕಚೇರಿಗೆ ಸೋಮವಾರ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಭೇಟಿ ನೀಡಿ ಅಹವಾಲು ಆಲಿಸಿದರು.

ಗ್ರಾಪಂ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಮಾತನಾಡಿ, ಮಲ್ಲಿಪಟ್ಟಣ ಸಮುದಾಯ ಭವನದ ಅಭಿವೃದ್ಧಿಗೆ ಹಾಗೂ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಬೇಕು. ನೆಲಬಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡಕ್ಕೆ ಹಾಗೂ ಶಿರದನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಕಾಂಪೌಂಡ್ ಕಟ್ಟಲು ಸಹಾಯ ಮಾಡಬೇಕು ಎಂದು ಮನವಿ ಮಾಡಿದರು.

ಗ್ರಾಪಂ ಉಪಾಧ್ಯಕ್ಷ ನಾಗರಾಜು, ಸದಸ್ಯರಾದ ಸುಮಿತ್ರಮ್ಮ, ಯಶೋಧಮ್ಮ, ಲಲಿತಾ ವೇದಮೂರ್ತಿ, ಪೂಜಾ ರಂಗಸ್ವಾಮಿ, ಚಂದ್ರೇಗೌಡ, ಪ್ರಕಾಶ್, ಪಿಡಿಒ ಅರುಣ್ ಕುಮಾರ್, ಕಾರ್ಯದರ್ಶಿ ಕೃಷ್ಣೇಗೌಡ, ಸಿಬ್ಬಂದಿ ಇದ್ದರು.

Post a Comment

0 Comments