ಕೊಣನೂರು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಾಳೆ ನ.೨೧ಕ್ಕೆ

ಅರಕಲಗೂಡು: ತಾಲೂಕಿನ ಕೊಣನೂರು ಗ್ರಾಮ ಪಂಚಾಯಿತಿಯಲ್ಲಿ ಮೊದಲನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನ. 21ರಂದು ಚುನಾವಣೆ ನಡೆಯಲಿದೆ.

ಪಂಚಾಯಿತಿಯ ಒಟ್ಟು 21 ಸ್ಥಾನಗಳಿಗೆ ಕಳೆದ ತಿಂಗಳು ಚುನಾವಣೆ ನಡೆದಿತ್ತು. ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಅ’ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ನ. 21ರ ಬೆಳಗ್ಗೆ 10.30ವರೆಗೆ ನಾಮಪತ್ರ ಸಲ್ಲಿಸಬಹುದು. ಮಧ್ಯಾಹ್ನ 12.45 ವರೆಗೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು 1 ಗಂಟೆ ತನಕ ಅವಕಾಶವಿದೆ. 

ಚುನಾವಣೆಗೆ ಅವಶ್ಯವಿದ್ದಲ್ಲಿ ಅದೇ ದಿನ ಮಧ್ಯಾಹ್ನ ಒಂದು ಗಂಟೆಗೆ ನಡೆಯಲಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ರಮೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0 Comments