ಜನಸೇವಕ ವಿಜಯ್ ಯವರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಉಪ್ಪಾರ ಸಮಾಜ ಆಗ್ರಹ

ಅರಕಲಗೂಡು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ ಉಪ್ಪಾರ  ಸಮಾಜದ ಯುವ ಮುಖಂಡ ಎಚ್.ಎನ್. ವಿಜಯ್ ಅವರಿಗೆ ಟಿಕೆಟ್ ನೀಡುವ ಮೂಲಕ ಹಿಂದುಳಿದ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಕೇರಳಾಪುರ ಉಪ್ಪಾರ ಸಮಾಜದ ಅಧ್ಯಕ್ಷ ಎನ್. ಮಹದೇವಪ್ಪ ಒತ್ತಾಯಿಸಿದರು.

ತಾಲೂಕಿನ ಬಸವಾಪಟ್ಟಣದಲ್ಲಿ ಗುರುವಾರ ಏರ್ಪಡಿಸಿದ್ದ ಉಪ್ಪಾರ ಸಮಾಜದ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ನಂತರ ರಾಜಕೀಯ ಪಕ್ಣಗಳು ಈ ಭಾಗದಲ್ಲಿ ನಮ್ಮ ಸಮಾಜಕ್ಕೆ ಯಾವುದೇ ಸ್ಥಾನಮಾನ ಕಲ್ಪಿಸಿಲ್ಲ. ಕಾಂಗ್ರೆಸ್ ಪಕ್ಷದ ಟಿಕೆಟ್ ಗೆ ಅರ್ಜಿ ಸಲ್ಲಿಸಿರುವ ವಿಜಯ್ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿ ಸಮುದಾಯದ ಜನರ ಬೇಡಿಕೆಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಉಪ್ಪಾರ ಸಮಾಜದ ಮುಖಂಡ ಕಾರ್ ಕೆ.ಜೆ. ರವಿ ಮಾತನಾಡಿ, ಸಮಾಜ ಸೇವಾಕಾರ್ಯಗಳಲ್ಲಿ ತೊಡಗಿರುವ ವಿಜಯ್ ಅವರು ಎಲ್ಲ ವರ್ಗದ ಸಮಸ್ಯೆಗಳಿಗೆ ಸ್ಪಂದಿಸುವ ಜತೆಗೆ ಕೈಲಾದ ಸೇವೆ  ಮಾಡುತ್ತಿದ್ದಾರೆ. ಕಾಂಗ್ರೆಸ್ ಟಿಕೆಟ್ ನೀಡಿದರೆ ಸುತ್ತಮುತ್ತಲ ಜಿಲ್ಲೆಗಳ ಸಮುದಾಯದ ಮತದಾರರು ಪಕ್ಷದ ಅಭ್ಯರ್ಥಿಗಳ ಬೆಂಬಲಕ್ಕೆ ನಿಲ್ಲಲಿದ್ದಾರೆ. ಇದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಹಕಾರಿಯಾಗುತ್ತದೆ ಎಂದರು.

ಮುಖಂಡ ಕೆ. ಹನುಮೇಗೌಡ ಮಾತನಾಡಿ, ವಿಜಯ್ ಅವರಿಗೆ ಟಿಕೆಟ್ ನೀಡಿದರೆ ಅವರ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಲಾಗುವುದು ಎಂದು ಹೇಳಿದರು.
  
ಪಿಎಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೆ.ಎಂ. ಲಕ್ಷ್ಮಣ್, ಮುಖಂಡರಾದ ಕೆ.ಪಿ. ಮೂರ್ತಿ, ಎಸ್.ಆರ್. ರವಿಕುಮಾರ್ ಇತರರಿದ್ದರು.

Post a Comment

0 Comments