ಅರಕಲಗೂಡು: ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾಗಿ ಬಿಜೆಪಿ ಸದಸ್ಯೆ ಎಚ್.ಎಸ್. ರಶ್ಮಿ ಅವಿರೋಧವಾಗಿ ಆಯ್ಕೆಯಾದರು.
ಲಕ್ಷ್ಮೀ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ರಶ್ಮಿ ಒಬ್ಬರೆ ನಾಮ ಪತ್ರ ಸಲ್ಲಿಸಿದ್ದರು
ತಹಶೀಲ್ದಾರ್ ಕೆ.ಆರ್.ಶ್ರೀನಿವಾಸ್ ಚುನಾವಣಾ ಕಾರ್ಯ ನಿರ್ವಹಿಸಿದರು. ಪಪಂ ಅಧ್ಯಕ್ಷೆ ಶಾರದಾ, ಮುಖ್ಯಾಧಿಕಾರಿ ಶಿವಕುಮಾರ್ ಹಾಗೂ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
0 Comments