ಅರಕಲಗೂಡು: ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಕಾರ್ಯಕರ್ತರ ಹಿತ ಕಾಯುವ ನಿಟ್ಟಿನಲ್ಲಿ ಕಳೆದ ನಾಲ್ಕು ವರ್ಷಗಳ ಕಾಲದಿಂದ ಅವಿರತವಾಗಿ ಮಂಚೂಣಿ ಸೇವೆ ಸಲ್ಲಿಸುತ್ತಿರುವ ಡಾ. ದಿನೇಶ್ ಭೈರೇಗೌಡ ಅವರ ಪಕ್ಷ ನಿಷ್ಠೆ ಅನನ್ಯ.
ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಗಳಲ್ಲಿ ತಾವೂ ಒಬ್ಬರಾಗಿದ್ದು ಬುಧವಾರ ಪಕ್ಷದ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಡಾ. ದಿನೇಶ್ ಭೈರೇಗೌಡ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಸಚಿವ ಎ. ಮಂಜು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿದ ಬಳಿಕ ಕಳೆದ ನಾಲ್ಕು ವರ್ಷಗಳ ಕಾಲ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ನನ್ನ ಶ್ರಮವಿದ್ದು ಇದು ಪಕ್ಷದ ವರಿಷ್ಠರಿಗೂ ಗೊತ್ತು. ಪಕ್ಷ ತಮಗೆ ಟಿಕೇಟ್ ನೀಡುವ ವಿಶ್ವಾಸವಿದೆ. ಹೀಗಾಗಿ ನಾಮ ಪತ್ರ ಸಲ್ಲಿಸುತ್ತೇನೆ. ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಸ್ಫರ್ಧೆಮಾಡುವಂತೆ ಒತ್ತಡ ಹೇರುತ್ತಿದ್ದಾರೆ,
ಮೂರು ಮಂದಿ ಆಕಾಂಕ್ಷಿಗಳು ಇರುವ ಕಾರಣ ನಿರ್ಧಾರ ತಡವಾಗುತ್ತಿದೆ, ಒಂದು ವೇಳೆ ಟಿಕೇಟ್ ದೊರೆಯದಿದ್ದರೆ ಪಕ್ಷದ ವರಿಷ್ಠರೊಂದಿಗೆ ಹಾಗೂ ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.
ಮುಖಂಡರಾದ ಕೇಶವ ಪ್ರಸಾದ್, ಲೋಕೇಶ್ ಇದ್ದರು.
0 Comments