ಅರಕಲಗೂಡು: ವಿದ್ಯಾರ್ಥಿಗಳು ಸಾಧಕರನ್ನು ಆದರ್ಶವಾಗಿಟ್ಟುಕೊಂಡು ಗುಣಮಟ್ಟದ ಶಿಕ್ಷಣ ಗಳಿಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸುವ ಮೂಲಕ ಉನ್ನತ ಸಾಧನೆ ಮಾಡಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ಶಾಸಕ ಎ. ಮಂಜು ಸಲಹೆ ನೀಡಿದರು.
ತಾಲೂಕಿನ ಕೊಣನೂರು ಬಿ.ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಸಾಂಸ್ಕೃತಿಕ ವೇದಿಕೆ, ಕ್ರೀಡಾ ಚಟುವಟಿಕೆ, ಎನ್ನೆಸ್ಸೆಸ್, ಸ್ಕೌಟ್ಸ್, ಗೈಡ್ಸ್ ಮತ್ತು ಯುವ ರೆಡ್ ಕ್ರಾಸ್ ಘಟಕ ಹಾಗೂ ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇಂಗ್ಲಿಷ್ ಕಲಿಕಾ ಶಿಕ್ಷಣ ಕಠಿಣವೇನಲ್ಲ, ಇಂದು ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಹೆಚ್ಚಿನದಾಗಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸಿ ಉನ್ನತ ಹುದ್ದೆ ಅಲಂಕರಿಸುತ್ತಿದ್ದಾರೆ. ಕಲಿಕೆಗೆ ಹಿಂಜರಿಯದೆ ಪರಿಶ್ರಮ ಪಡಸಬೇಕು. ಮುಖ್ಯವಾಗಿ ನೈತಿಕೆ ಶಿಕ್ಷಣವೂ ಅಷ್ಟೆ ಮುಖ್ಯ. ಈ ನಿಟ್ಟಿನಲ್ಲಿ ಉತ್ತಮ ನಡೆ ನುಡಿ ರೂಢಿಸಿಕೊಂಡು ಪದವಿ ಗಳಿಸಿದ ನಂತರವೂ ಭವಿಷ್ಯ ರೂಪಿಸಿಕೊಳ್ಳುವ ಮುಖೇನ ಸಮಾಜಕ್ಕೆ ಬೆಳಕಾಗಬೇಕು ಎಂದರು.
ಸಮಾರೋಪ ಭಾಷಣ ಮಾಡಿದ ನಿವೃತ್ತ ಉಪನ್ಯಾಸಕ ಹಾಗೂ ಸಿಡಿಸಿ ಸದಸ್ಯ ಕೆ.ಎಸ್. ವಾಸುದೇವ್ ಮಾತನಾಡಿ, ವಿದ್ಯಾರ್ಥಿ ದಿಸೆಯಲ್ಲೇ ವಿದ್ಯೆ ವಿನಯತೆ ಮೈಗೂಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ವಿಫುಲ ಅವಕಾಶಗಳಿವೆ. ಶಿಕ್ಷಣದ ಜತೆಗೆ ಹಲವಾರು ಸಾಂಸ್ಕೃತಿಕ ಚಟುವಟಕೆಗಳಲ್ಲಿ ತೊಡಗಿಸಿಕೊಂಡು ದೈಹಿಕವಾಗಿ ಸಾಮರ್ಥ್ಯ ವೃದ್ಧಿಸಿಕೊಂಡರೆ ಆರೋಗ್ಯಕರ ಬದುಕಿಗೆ ನಾಂದಿಯಾಗಲಿದೆ ಎಂದು ಕಿವಿಮಾತು ಹೇಳಿದರು.
ಪ್ರಾಂಶುಪಾಲ ಬಸವರಾಜು ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಸ್.ಸಿ. ಚೌಡೇಗೌಡ, ಗ್ರಾಪಂ ಅಧ್ಯಕ್ಷೆ ಮಿಜ್ಬಾ ರಿಜ್ವಾನ್, ಕ್ರೀಡಾ ಮತ್ತು ಎನ್ನೆಸ್ಸೆಸ್ ಘಟಕದ ಸಂಚಾಲಕ ಲಕ್ಷಿö್ಮÃಶ್, ಸಾಂಸ್ಕೃತಿಕ ವೇದಿಕೆ ರೆಡ್ ಕ್ರಾಸ್ ಘಟಕದ ಸಂಚಾಲಕ ರವಿಕುಮಾರ್, ಸ್ಕೌಟ್ಸ್ ಗೈಡ್ಸ್ ಘಟಕದ ಡಾ. ಸತ್ಯನಾರಾಯಣ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಮತ್ತು ಉಪನ್ಯಾಸಕರು ಇದ್ದರು.
0 Comments