ಕೊಡಗು ಜಿಲ್ಲೆಯ ಬೆಸೂರು ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಸ್ಪರ್ಧಿಸಿರುವ ನಿಲುವಾಗಿಲು ಗ್ರಾಮದ ರಾಜೇಶ್ವರಿ ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ.
2025ರಿಂದ 2030 ವರೆಗಿನ ಆಡಳಿತ ಮಂಡಳಿ ಚುನಾವಣೆಗೆ ಸಾಲಗಾರರ ಮಹಿಳಾ ಸಾಮಾನ್ಯ ಕ್ಷೇತ್ರದಿಂದ ರಾಜೇಶ್ವರಿ ಮಂಜುನಾಥ ಅವರ ಸ್ಪರ್ಧೆ ಕುತೂಹಲ ಕೆರಳಿಸಿದೆ.
ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಬಿ.ಜಿ. ಗಂಗಾಧರ್ ( ದೊಡ್ಮನೆ ಗಿರೀಶ್) ಹಾಗೂ ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದಿಂದ ರತನ್ ಬೆಸೂರು ಅವರು ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ.
ಜನವರಿ 25ರಂದು ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ಬೆಸೂರು ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಮತದಾನ ನಡೆಯಲಿದೆ.
0 Comments